ತೊಗರಿಹಂಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ

16 ckm 5
ಚಿಕ್ಕಮಗಳೂರು ತಾಲೂಕಿನ ತೊಗರಿಹಂಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಹಾಗೂ ವಿವಿಧ ಸಂಘಟನೆಗಳಿAದ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
Published on

ಚಿಕ್ಕಮಗಳೂರು: ತಾಲೂಕಿನ ತೊಗರಿಹಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೇನಹಳ್ಳಿಯಲ್ಲಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ತೊಗರಿಹಂಕಲ್ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.

ಸರ್ಕಾರಿ ಪ್ರೌಢ ಶಾಲೆ, ಕೂಸಿನ ಮನೆ, ತಮಿಳು ಶಾಲೆ ಹಾಗೂ ಬಸ್ ನಿಲ್ದಾಣದಲ್ಲಿ ಬೆಳೆದಿದ್ದ ಆಳೆತ್ತರದ ಗಿಡ ಗಂಟಿಗಳನ್ನು ತೆರವುಗೊಳಿಸುವ ಮೂಲಕ ಸುಂದರವಾದ ಪರಿಸರವನ್ನು ರೂಪುಗೊಳ್ಳುವಲ್ಲಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ತೊಗರಿಹಂಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಿಡಿಒ ಇಡೀ ದಿನ ಶ್ರಮದಾನ ಮಾಡುವ ಮೂಲಕ ಸ್ವಚ್ಚಗೊಳಿಸಿದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಜ್ರೇಶ್ವರಿ, ಕಾರ್ಯದರ್ಶಿ ಸವಿತಾ, ಖಜಾಂಚಿ ಸಿಲ್ವಿ, ಎಂಬಿಕೆ ಶೈಲಾ, ಐಸಿಆರ್‌ಪಿ ಮಂಜುಳ, ಫಾತಿಮಾ, ಸವಿತಾ, ಮಂಜುಳಾ, ಗ್ರಾಪಂ ಅಧ್ಯಕ್ಷ ಸಾದಿಕ್, ಸದಸ್ಯರಾದ ಸುರೇಶ್, ದಾವಿದ್, ಮುಸ್ತಾಫಾ, ಪನ್ನೀರ್, ಸವಿತಾ, ಪಿಡಿಒ ಪ್ರವೀಣ್, ಗ್ರಾಪಂ ಸಿಬ್ಬಂದಿ ವರ್ಗದವರು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net