ತೊಳಲು ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ

5blrp3
Published on

ಬೇಲೂರು: ತಾಲೂಕಿನ ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಲಕ್ಷ್ಮೀ ಅಧ್ಯಕ್ಷರಾಗಿ, ರಂಜಿತಾ ಉಪಾಧ್ಯಕ್ಷರಾಗಿ ಆಯ್ಕೆಯಾದರು.


ಎರಡನೇ ಅವಧಿಯ ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೂ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 14 ಸದಸ್ಯರನ್ನು ಒಳಗೊಂಡಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ಹಾಗೂ ಪುಷ್ಪಾ, ಉಪಾಧ್ಯಕ್ಷ ಸ್ಥಾನಕ್ಕೆ ರಂಜಿತಾ ಮತ್ತು ಸುಜಾತಾ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಲಕ್ಷ್ಮೀ 8 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಪುಷ್ಪಾ 6 ಮತಗಳನ್ನು ಪಡೆದು ಪರಾಭವಗೊಂಡರು.

ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಂಜಿತಾ 9 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಸುಜಾತಾ 5 ಮತಗಳನ್ನು ಪಡೆದು ಸೋಲು ಕಂಡರು. ಚುನಾವಣಾಧಿಕಾರಿಯಾಗಿದ್ದ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರಂಜಿತ್ ಇಬ್ಬರ ಆಯ್ಕೆಯನ್ನು ಘೋಷಿಸಿದರು.ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಮಲ್ಲೇಗೌಡ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ಗ್ರಾಪಂ ಮಾಜಿ ಅಧ್ಯಕ್ಷರಾದ ವೆಂಕಟೇಶ್, ಸುರೇಶ್, ಮಂಜೇಗೌಡ, ಸದಸ್ಯರಾದ ಚಂದ್ರೇಗೌಡ, ಚಂದ್ರಶೇಖರ್, ಸುಧಾ, ಗೀತಾ, ರಮ್ಯಾ, ಮುಖಂಡರಾದ ಪುಟ್ಟಸ್ವಾಮಿ, ಕುಮಾರ್, ಹರೀಶ್, ಮೋಹನ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net