

ಚಿಕ್ಕಮಗಳೂರು: ಸ್ವಾತಂತ್ರö್ಯ ಹೋರಾಟದಲ್ಲಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿ ನೆನಪು ಮಾಡಿಕೊಂಡಾಗ ಮಾತ್ರ ಸ್ವಾತಂತ್ರö್ಯ ದಿನಾಚರಣೆಗೆ ನಿಜ ಅರ್ಥ ಬರುತ್ತದೆ ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ತಿಳಿಸಿದರು.
ನಗರದ ನಗರಸಭೆ ಆವರಣದಲ್ಲಿ ಶುಕ್ರವಾರ ೭೯ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಜನತೆಗೆ ಸ್ವಾತಂತ್ರö್ಯ ಸಂದೇಶವನ್ನು ನೀಡಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಿದಾಗ ಸ್ವತಂತ್ರö್ಯ ಹೋರಾಟದ ಬಗ್ಗೆ ಅರಿವು ಮೂಡಲು ಸಹಕಾರಿಯಾಗುತ್ತದೆ ಎಂದರು.
ಇAದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ಣುಡಿಯಂತೆ ಭಾರತದ ಇತಿಹಾಸ, ಸ್ವಾತಂತ್ರö್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಿದಾಗ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಹೇಳಿದರು.
ಭಾರತದಲ್ಲಿ ಕಷ್ಟಸಾಧ್ಯವಾಗಿರುವ ಬಡತನ ನಿರ್ಮೂಲನೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿದಾಗ ಮಹಾತ್ಮ ಗಾಂಧೀಜಿ ಕಂಡ ಕನಸು ನನಸು ಮಾಡಲು ಸಾಧ್ಯ ಎಂದು ಹೇಳಿದರು.
ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಬ್ರಿಟೀಷರ ದಬ್ಬಾಳಿಕೆಯಿಂದ ಭಾರತ ದೇಶ ನಲುಗಿತ್ತು. ಇದನ್ನು ಕಿತ್ತುಹಾಕಲು ಸ್ವತಂತ್ರö್ಯ ಹೋರಾಟ ರೂಪಿಸಿದ ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್ ಚಂದ್ರಬೋಸ್, ಗೋಪಾಲಕೃಷ್ಣ ಗೋಖಲೆ, ಬಾಲಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್, ಪಂಡಿತ್ ಜವಾಹರಲಾಲ್ ನೆಹರು ಮುಂತಾದ ಮಹನೀಯರುಗಳನ್ನು ನೆನಪು ಮಾಡಿಕೊಳ್ಳುವ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಎ.ಸಿ. ಕುಮಾರಗೌಡ, ಗೋಪಿ, ಲಕ್ಷö್ಮಣ್, ನಾಮಿನಿ ಸದಸ್ಯರಾದ ಪ್ರಕಾಶ್ ರೈ, ಪ್ರಸಾದ್ ಅಮೀನ್, ವಸೀಮ್, ಫಯಾಜ್ ಅಹಮದ್, ಯಶೋಧ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.