

ಮೈಸೂರು: ಕರ್ನಾಟಕ ಮೃಗಾಲಯ ಪ್ರಾಧಿಕಾರದ 152ನೇ ಆಡಳಿತ ಮಂಡಳಿ ಸಭೆ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.
ಮೃಗಾಲಯ ಪ್ರಾಧಿಕಾದ ವ್ಯಾಪ್ತಿಗೆ ಬರುವ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಪ್ರವಾಸಿಗರ ಸಫಾರಿ ವೀಕ್ಷಣೆಗಾಗಿ ಮಿನಿ ಬಸ್ ಖರೀದಿಸಲು ಅನುಮತಿ ನೀಡಲಾಯಿತು.
ಬನ್ನೇರುಘಟ ಜೈವಿಕ ಉದ್ಯಾನವನದ ಸಿಬ್ಬಂದಿ ಕ್ಷೇಮ ನಿಧಿ ಸ್ಥಾಪನೆಗೆ ಅನುಮೋದನೆ ದೊರೆಯಿತು. ಉಳಿದಂತೆ ಮೃಗಾಲಯಗಳ ಅಭಿವೃದ್ಧಿ ಮತ್ತು ಆಡಳಿತಾತ್ಮಕ ವಿಚಾರಗಳ ಕುರಿತು ಚರ್ಚಿಸಲಾಯಿತು.
ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಉಪಾಧ್ಯಕ್ಷರೂ ಆದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ) ವಿಜಯಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಸದಸ್ಯರಾದ ಸಂಜಯ್ ಎಸ್.ಬಿಜ್ಜೂರು, ಮೈಸೂರು ಮೇಯರ್ ಶಿವಕುಮಾರ್ ಇನ್ನಿತರರು ಪಾಲ್ಗೊಂಡಿದ್ದರು.