ಮೈಸೂರು: ವಾಹನ ತಪಾಸಣೆಯನ್ನು ತೀವ್ರಗೊಳಿಸಿರುವ ನಗರ ಪೊಲೀಸರು ತ್ರಿಬಲ್ ರೈಡಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಒಂದೇ ವಾರದಲ್ಲಿ 121 ಪ್ರಕರಣ ದಾಖಲಿಸಿ ವಾಹನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.
ಈ ವಿಶೇಷ ಕಾರ್ಯಾಚರಣೆಯಲ್ಲಿ ತ್ರಿಬಲ್ ರೈಡಿಂಗ್‌ನಿಂದ ಆಗಬಹುದಾದ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ನ.27 ರಿಂದ ಡಿ.3ರವರೆಗೆ ನಗರದೆಲ್ಲೆಡೆ ವಿಶೇಷ ಕಾರ್ಯಾಚರಣೆ ನಡೆಸಿ ತ್ರಿಬಲ್ ರೈಡಿಂಗ್ ಮಾಡಿದವರ ಒಟ್ಟು 121 ಪ್ರಕರಣ ದಾಖಲಿಸಿದ್ದಾರೆ.
ವಾಹನಗಳ ತಪಾಸಣೆ, ತ್ರಿಬಲ್ ರೈಡಿಂಗ್ ವಿರುದ್ಧ ಕಾರ್ಯಾಚರಣೆ ಮುಂದುವರಿಯುವುದಲ್ಲದೆ ಇತರೇ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನಗಳ ಜತೆಯಲ್ಲಿ ಅವಶ್ಯಕ ದಾಖಲಾತಿ ಇಟ್ಟುಕೊಂಡಿರಬೇಕು ಎಂದು ನಗರ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.