ಮೈಸೂರು: ತ್ರಿಬಲ್ ರೈಡಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರ ಸಂಚಾರ ಪೊಲೀಸರು, ಎರಡು ವಾರದಲ್ಲಿ 103 ದ್ವಿಚಕ್ರ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಾಗಿರುವ 103 ವಾಹನಗಳನ್ನು ಪರಿಶೀಲಿಸಿದಾಗ ಸಂಚಾರ ನಿಯಮ ಉಲ್ಲಂಘನೆಯ ಒಟ್ಟು 760 ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ. ಇಂತಹ ವಾಹನಗಳ ಅಗತ್ಯ ದಾಖಲೆ ಪರಿಶೀಲಿಸಿ, ದಂಡ ವಸೂಲಿ ಮಾಡಿದ ಬಳಿಕ ತಿಳಿವಳಿಕೆ ನೀಡಿ ಕಳುಹಿಸಲಾಗುತ್ತಿದೆ. ಈ ಕಾರ್ಯಾಚರಣೆ ಮುಂದುವರಿಯಲಿದ್ದು, ಇತರ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಸಂಬಂಧಪಟ್ಟ ಅವಶ್ಯಕ ದಾಖಲಾತಿ ತಮ್ಮೊಂದಿಗೆ ಇಟ್ಟುಕೊಳ್ಳುವಂತೆ ನಗರ ಪೊಲೀಸ್ ಕಮೀಷನರ್ ರಮೇಶ್ ಬಾತೋನ್ ತಿಳಿಸಿದ್ದಾರೆ.