ತ್ರಿವಿಧ ದಾಸೋಹಿ ಜಯಂತಿ ಆಚರಣೆ

Shivakumara swamiji siddaganga
Published on

ಮೈಸೂರು: ಮೈಸೂರು ಶರಣ ಮಂಡಳಿ ವತಿಯಿಂದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ 118 ನೇ ಜಯಂತಿ ಕಾರ್ಯಕ್ರಮವನ್ನು ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್ ಮಾತನಾಡಿ, ಶಿವಕುಮಾರ ಸ್ವಾಮೀಜಿ ವಿಶ್ವದ ಅತ್ಯಂತ ಶ್ರೇಷ್ಠ ಸಂತರಲ್ಲಿ ಒಬ್ಬರಾಗಿದ್ದಾರೆ. ಜಾತ್ಯತೀತ, ಧರ್ಮಾತೀತವಾಗಿ ಎಲ್ಲ ಮಕ್ಕಳಿಗೂ ಅನ್ನ, ಅಕ್ಷರ ದಾಸೋಹ ವ್ಯವಸ್ಥೆ ಕಲ್ಪಿಸಿದರು.

ಈಗಲೂ ಅವರು ಅಂದು ಹಚ್ಚಿದ ಒಲೆ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಅನ್ನ ನೀಡುತ್ತಿದೆ. ಇವರಿಂದಾಗಿ ಸಿದ್ಧಗಂಗಾ ಮಠದಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ವಿಶ್ವಾದಾದ್ಯಂತ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದರು.

ಮೈಸೂರು ಪತ್ರಕರ್ತ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿ, ಶಿವಕುಮಾರ ಸ್ವಾಮೀಜಿಯವರು ವಿಶ್ವ ಕಂಡ ಶ್ರೇಷ್ಠ ಆಧ್ಯಾತ್ಮಿಕ ನಾಯಕ, ಮಹಾನ್ ಮಾನವತಾವಾದಿಯಾಗಿದ್ದರು. ತಮ್ಮ ಕಾರ್ಯಗಳ ಮೂಲಕ ನಡೆದಾಡುವ ದೇವರೆಂದೇ ಖ್ಯಾತರಾಗಿದ್ದರು ಎಂದರು.

ಮುಖಂಡರಾದ ಜೈಶಂಕರ್, ಮೂಗೂರು ನಂಜುಂಡಸ್ವಾಮಿ, ಬಸವರಾಜೇಂದ್ರ ಸ್ವಾಮಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net