ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಮಾಜಿ ಸಿಎಂ ಕುಮಾರ ಸ್ವಾಮಿ ನೆರವು

D25MDG2P1.jpg WEB
Published on

ಮೂಡಿಗೆರೆ: ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಬಾಳೂರು ಹೋಬಳಿ ಬಿರ್ಗರು ಗ್ರಾಮದ ದಿವಾಕರ ಮತ್ತು ಶಾಲಿನಿ ಅವರ 7 ವರ್ಷದ ಮಗ ಋತ್ವಿಕ್​ನ ಚಿಕಿತ್ಸೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರವು ನೀಡುವುದಾಗಿ ಒಪ್ಪಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್​ಕುಮಾರ್ ಹೇಳಿದರು.

ಋತ್ವಿಕ್​ನ ಚಿಕಿತ್ಸೆಗೆ 52 ಲಕ್ಷ ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕನ ತಂದೆ-ತಾಯಿ ಬಡವರು. ಇಷ್ಟೊಂದು ಹಣ ಭರಿಸಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾನು ಒಳಗೊಂಡು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಅವರ ನೇತೃತ್ವದಲ್ಲಿ ಶನಿವಾರ ಜೆಡಿಎಸ್ ನಿಯೋಗವು ಅನಾರೋಗ್ಯದಿಂದ ಬಳಲುತ್ತಿರುವ ಬಾಲಕ ಋತ್ವಿಕ್ ಮತ್ತವರ ಪಾಲಕರನ್ನು ಶನಿವಾರ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದೆವು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಡದಿಯ ತೋಟದ ಮನೆಯಲ್ಲಿ ಭೇಟಿಯಾಗಿ ವಿವರಿಸಿದಾಗ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ರಾಮಚಂದ್ರೇಗೌಡ ಅವರನ್ನು ಸಂರ್ಪಸಿ ಬಾಲಕನನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡು ಉತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net