ಥ್ರೋಬಾಲ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

29 ard 01
Published on

ಔರಾದ್: ಸಂತಪುರ ಸಿದ್ಧರಾಮೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ, ಚಂದ್ರಪ್ಪ ಗೌರಶೆಟ್ಟಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಶುಕ್ರವಾರ ಬೀದರ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು, ಸ್ಥಾನಿಕ ಕಮಿಟಿ ಅಧ್ಯಕ್ಷ ಸಂಜುಕುಮಾರ ಜುಮ್ಮಾ, ಆಡಳಿತಾಧಿಕಾರಿ ಮೋಹನ ರೆಡ್ಡಿ ಶುಭ ಹಾರೈಸಿದ್ದಾರೆ. ಪ್ರಾಂಶುಪಾಲ ನವೀಲಕುಮಾರ ಉತ್ಕಾತ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಕಾಂತ ಶೇರಿಕಾರ, ಸಂತೋಷ ಶೆಂಬೆಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net