ಮಂಗಳೂರು: ದ.ಕ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಗ್ರಾಮಪಂಚಾಯಿತಿ ಮೊದಲ ಹಂತದ ಚುನಾವಣೆಗೆ ಸಂಬಂಧಿಸಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.
ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆಯುತ್ತಿದ್ದು, ಎಲ್ಲ ಮತಗಟ್ಟೆಗಳಲ್ಲಿ ಜನರ ಸಾಲು ಕಂಡು ಬರುತ್ತಿದೆ. ತಲಪಾಡಿಯ ದ.ಕ ಜಿಪಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಗ್ಗೆ 9:30ರ ವೇಳೆಗೆ ಶೇ.21ರಷ್ಟು ಮತದಾನವಾಗಿದೆ.
106 ಗ್ರಾಮ ಪಂಚಾಯತಿಗಳ 1631 ಮತಕ್ಷೇತ್ರಗಳಿಗೆ ಇಂದು ಮೊದಲ ಹಂತದಲ್ಲಿ ಮತದಾನ ಇಂದು ನಡೆಯುತ್ತಿದೆ.3845 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಪ್ರತಿ ಮತಗಟ್ಟೆಯಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದ್ದು, ಮಾಸ್ಕ್ ಧರಿಸಿ ಸುರಕ್ಷಿತ ಅಂತರ ಕಾಪಾಡಿಕೊಂಡು ಸಾಲಿನಲ್ಲಿ ಮತದಾರರು ಮತದಾನ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತರು ಮತದಾರರ ದೇಹ ತಾಪಮಾನ ಪರೀಕ್ಷಿಸಿ ಮತಗಟ್ಟೆಯೊಳಗೆ ಬಿಡುತ್ತಿದ್ದಾರೆ.
ಬೆಳಗ್ಗೆ 9 ಗಂಟೆ ವೇಳೆಗೆ ಮಂಗಳೂರು ಶೇ.14.6, ಮೂಡುಬಿದರೆ ಶೇ.15.64, ಬಂಟ್ಟಾಳ ಶೇ.13.75 ರಷ್ಟು ಮತದಾನವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಶೇ.14.4 ಮತದಾನವಾಗಿದೆ.