ದಂಡಿನ ಮಾರಮ್ಮನ ಹಬ್ಬಕ್ಕೆ ಚಾಲನೆ

31 mlv 2
Published on

ಮಳವಳ್ಳಿ: ಪಟ್ಟಣದಲ್ಲಿ ಐದು ದಿನಗಳ ಕಾಲ ನಡೆಯುವ ಸಿಡಿ ಹಬ್ಬಕ್ಕೆ ಮಂಗಳವಾರ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯ ದೊಡ್ಡಕರೆ ಪಕ್ಕದಲ್ಲಿರುವ ದಂಡಿನ ಮಾರಮ್ಮನ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಕಂರ್ಯಗಳನ್ನು ನಡೆಸುವ ಮೂಲಕ ಚಾಲನೆ ನೀಡಲಾಯಿತು.

ದೇವಾಲಯವನ್ನು ವಿವಿಧ ಹೂವುಗಳಿಂದ ಸಿಂಗರಿಸಲಾಗಿತ್ತು. ಹಬ್ಬದ ಪ್ರಯುಕ್ತ ದಂಡಿನ ಮಾರಮ್ಮ ದೇವಿಯ ವಿಗ್ರಹವನ್ನು ವಿವಿಧ ಬಗೆಯ ಹೂ ಹಾಗೂ ಚಿನ್ನದ ಆಭರಣಗಳಿಂದ ಅಲಂಕರಿಸಿ, ಹೋಮ ಹವನ ನೆರೆವೇರಿಸಲಾಯಿತು. ಪಟ್ಟಣ ಸೇರಿದಂತೆ ತಮ್ಮಡಹಳ್ಳಿ, ಎಂ.ಬಸವನಪುರ, ಮಾಗನೂರು, ಬುಗತಗಹಳ್ಳಿ, ಅಂಚೇದೊಡ್ಡಿ, ನಿಡಘಟ್ಟ, ತಳಗವಾದಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಹಬ್ಬವನ್ನು ಆಚರಿಸಲಿದ್ದು, ಸಹಸ್ರಾರು ಮಹಿಳೆಯರು ಕುಟುಂಬದೊಂದಿಗೆ ಆಗಮಿಸಿದ್ದರು.

ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಲಿನ ಅಂಗಳದಲ್ಲಿ ಮಕ್ಕಳ ಆಟಿಕೆಗಳು, ಪೂಜಾ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲಾಗಿತ್ತು. ಪೊಲೀಸರು ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net