ದಕ್ಷ ಯಜ್ಞ ಪೌರಾಣಿಕ ನಾಟಕ

22hgr1
Published on

ಹಲಗೂರು: ಟಿ.ವಿ.ಮಾಧ್ಯಮಗಳ ಹೊಡೆತಕ್ಕೆ ಸಿಲುಕಿ ನಲುಗಿರುವ ನಾಟಕ ಕಲೆ ಇಂದಿಗೂ ಜೀವಂತವಾಗಿದೆ ಎಂದರೆ, ಇದಕ್ಕೆ ಗ್ರಾಮೀಣ ಪ್ರದೇಶದ ಜನರ ಪ್ರೋತ್ಸಾಹ ಹಾಗೂ ಆಸಕ್ತಿಯೇ ಕಾರಣವಾಗಿದೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು.   ಸಮೀಪದ ಹಾಡ್ಲಿ-ಮೇಗಳಾಪುರ ವೃತ್ತದಲ್ಲಿ ನಡುಮಾರ್ಗದ ಶ್ರೀ ಬಸವೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ಸದಸ್ಯರು ಪ್ರದರ್ಶಿಸಿದ 'ದಕ್ಷ ಯಜ್ಞ ಅಥವಾ ಭೃಗು ಮುನಿಯ ಗರ್ವ ಭಂಗ' ಎಂಬ ಪೌರಾಣಿಕ ನಾಟಕದಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ಇಂದಿನ ದಿನಮಾನಗಳಲ್ಲಿ ಟಿವಿ, ಮೊಬೈಲ್‌ ಹಾವಳಿಯಿಂದ ಪೌರಾಣಿಕ ನಾಟಕಗಳು ನಶಿಸುತ್ತಿವೆ. ಗ್ರಾಮೀಣ ಭಾಗದ ಕಲಾಭಿಮಾನಿಗಳು ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net