ದೇಗುಲಗಳಲ್ಲಿ ದೇವರ ದರ್ಶನ ಪಡೆದ ಭಕ್ತರು

8ark4
Published on

ಅರಕಲಗೂಡು: ತಾಲೂಕಿನ ರಾಮನಾಥಪುರದ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ಮಹಾಶಿವರಾತ್ರಿ ಅಂಗವಾಗಿ ನಡೆದ ಪೂಜಾ ಕಾರ್ಯದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.


ಶ್ರೀರಾಮೇಶ್ವರ, ಶ್ರೀಅಗಸ್ತ್ಯೇಶ್ವರ, ಪಟ್ಟಾಭಿರಾಮ, ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಅಲಂಕೃತ ಸಾರೋಟಿನಲ್ಲಿ ಶಿವ ದೇವರ ಭಾವಚಿತ್ರವಿಟ್ಟು ಮಂಗಳವಾದ್ಯ ಮೂಲಕ ಉತ್ಸವ ನಡೆಸಲಾಯಿತು.


ಚತುರ್ಯುಗ ಮೂರ್ತಿ ಶ್ರೀರಾಮೇಶ್ವರ ದೇವಾಲಯ ಭಕ್ತರಿಂದ ತುಂಬಿ ತುಳುಕಿತ್ತು. ದೇವಸ್ಥಾನದ ಪ್ರಾಂಗಣದಲ್ಲಿರುವ 35 ಶಿವಲಿಂಗಗಳಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ಸಲ್ಲಿಸಿ ಭಕ್ತರು ಭಕ್ತಿ ಮೆರೆದರು.


ಉತ್ಸವ: ತಾಲೂಕಿನ ಶಿರದನಹಳ್ಳಿ ಗ್ರಾಮದ ಪ್ರಸಿದ್ಧ ಶ್ರೀಶನೈಶ್ಚರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿದ್ದರು. ಪ್ರಮುಖ ಬೀದಿಗಳಲ್ಲಿ ದೇವರ ಉತ್ಸವ ನಡೆಸಲಾಯಿತು. ಭಕ್ತರು ಶಿವನಾಮ ಸ್ಮರಣೆ ಮಾಡಿ ಪ್ರಸಾದ ಸ್ವೀಕರಿಸಿದರು.


ಕೇರಳಾಪುರದ ಐತಿಹಾಸಿಕ ಶ್ರೀವೀರಭದ್ರೇಶ್ವರ, ಕಾಳೇನಹಳ್ಳಿಯ ಈಶ್ವರ ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net