ದತ್ತಪೀಠ ವಿವಾದ ಮತ್ತೆ ಮುನ್ನಲೆಗೆ

21 ckm 3
ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿನ ಗೋರಿಗೆ ಪೂಜೆ ಸಲ್ಲಿಸಲಾಗಿದೆ ಎಂದು ಆರೋಪಿಸಿ ದತ್ತಪೀಠದಲ್ಲಿ ಪ್ರತಿಭಟನೆ ನಡೆಸಿದ ಶಾಖಾದ್ರಿ ಕುಟುಂಬಸ್ಥರು.
Published on

ಚಿಕ್ಕಮಗಳೂರು: ಭಜರಂಗದಳ ಹಾಗೂ ವಿಶ್ವ ಹಿಂದು ಪರಿಷತ್‌ನಿಂದ ದತ್ತಜಯಂತಿ ಆಚರಣೆಗೆ ದಿನಗಣನೆ ಆರಂಭವಾಗುತ್ತಿದ್ದAತೆ ಮತ್ತೆ ದತ್ತಪೀಠ ವಿವಾದ ಮುನ್ನೆಲೆಗೆ ಬಂದಿದೆ. ವಿವಾದಿತ ಗುಹೆಯೊಳಗಿರುವ ಗೋರಿಗಳ ಮೇಲೆ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿರುವ ಆರೋಪ ಕೇಳಿಬಂದಿದ್ದು, ಇದು ಇಸ್ಲಾಂ ಧರ್ಮದ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನ ಎಂದು ಆರೋಪಿಸಿ ಶಾಖಾದ್ರಿ ಕುಟುಂಬಸ್ಥರು ದತ್ತಪೀಠದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಗೋರಿಗೆ ಪೂಜೆ ಸಲ್ಲಿಸಲಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಶಾಖಾದ್ರಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಲ್ಲದೆ ಮುಜರಾಯಿ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದವನ್ನೂ ನಡೆಸಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ವಿವಾದಿತ ಗುಹೆಯೊಳಗಿರುವ ಗೋರಿಗಳಿಗೆ ಅರ್ಚಕರು ಕುಂಕುಮ ಹಚ್ಚಿ ಪೂಜೆ ಮಾಡಿದ್ದಾರೆ. ಇದು ಮುಸ್ಲಿಂ ಸಮುದಾಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲೇ ಗೋರಿಗೆ ಕುಂಕುಮ ಹಚ್ಚಿ ಪೂಜೆ ಮಾಡಿದ್ದಕ್ಕೆ ಮುಸ್ಲಿಂ ಸಮುದಾಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇದೀಗ ಮತ್ತೆ ಕುಂಕುಮ ಹಚ್ಚಿ ಗೋರಿಗಳ ಪೂಜೆ ಮಾಡಿದಕ್ಕೆ ವಿರೋಧ ವ್ಯಕ್ತವಾಗಿದೆ. ಈ ಹಿಂದೂ ಮುಸ್ಲಿಂ ಭೂ ವಿವಾದ ಕಳೆದ ೨೫ ವರ್ಷಗಳಿಂದ ನಡೆಯುತ್ತಿದೆ.

ಇನಾಂ ದತ್ತಾತ್ರೇಯ ಪೀಠ ಸಂಪೂರ್ಣ ಹಿಂದೂ ಪೀಠವಾಗಬೇಕು ಎಂದು ಆಗ್ರಹಿಸಿ ಡಿ. ೬ ರಿಂದ ೧೪ರ ವರೆಗೆ ದತ್ತಜಯಂತಿ ನಡೆಯಲಿದೆ. ಈ ಮಧ್ಯೆ ಕುಂಕುಮ ವಿವಾದ ಶುರುವಾಗಿದ್ದರಿಂದ ಹಿಂದೂ ಸಂಘಟನೆಗಳ ಮುಖಂಡರ ಸಭೆಯನ್ನು ಜಿಲ್ಲಾಡಳಿತ ಕರೆದಿದೆ.

ಏನಿದು ದತ್ತಪೀಠ ವಿವಾದ?

ಶ್ರೀಗುರು ದತ್ತಾತ್ರೇಯ ಪೀಠ ಅಥವಾ ಬಾಬಾ ಬುಡನ್ ಗಿರಿ ಎಂದು ಕೆಲವರು ಕರೆಯಲ್ಪಡುವ ಪೀಠ ಹಿಂದುಗಳಿಗೆ ಸೇರಿz್ದೆÃ ಅಥವಾ ಮುಸ್ಲಿಮರಿಗೆ ಸೇರಿz್ದÉÃ ಎಂಬ ವಿಷಯ ಹಿಂದಿನಿAದಲೂ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎಂದು ಹೇಳಲಾಗಿದೆ. ಈ ಸ್ಥಳವನ್ನು ಬಾಬಾ ಬುಡನ್ ಗಿರಿ ಎಂದು ಕೆಲವರು ಕರೆದರೆ, ಇನ್ನು ಕೆಲವರು ಇನಾಂ ದತ್ತಾತ್ರೇಯ ಪೀಠ ಎನ್ನುತ್ತಾರೆ. ಒಂದು ಕಾಲದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ತಾಣವಾಗಿ ಇದು ಗುರುತಿಸಲ್ಪಟ್ಟಿತ್ತು. ಆದರೆ ಬಳಿಕ ವಿವಾದ ಹುಟ್ಟಿಕೊಂಡಿತು.

ದತ್ತಪೀಠಕ್ಕೆ ಹಿಂದೂ ಮತ್ತು ಮುಸ್ಲಿಮರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದರು. ಬಿಜೆಪಿ ೧೯೯೮ರಲ್ಲಿ ದತ್ತ ಮಾಲಾ ಅಭಿಯಾನ ಆರಂಭಿಸಿದ ನಂತರ ಕ್ಷೇತ್ರವು ದೇಶವ್ಯಾಪಿ ಗಮನ ಸೆಳೆಯಿತು. ಸಂಘ ಪರಿವಾರದ ಪ್ರಯತ್ನಗಳಿಗೆ ಪ್ರತಿಯಾಗಿ ಕೋಮು ಸೌಹಾರ್ದ ವೇದಿಕೆಯೂ ಚಿಕ್ಕಮಗಳೂರಿನಲ್ಲಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯುತ್ತಿತ್ತು. ಕ್ಷೇತ್ರದಲ್ಲಿದ್ದ ಮುಜಾವವರು ಎರಡೂ ಪದ್ಧತಿಗಳ ಪ್ರಕಾರ ಪೂಜೆ ಮಾಡಿಕೊಡುತ್ತಿದ್ದಾರೆ. ಇದೀಗ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಸರ್ಕಾರ ಆಡಳಿತ ಮಂಡಳಿ ರಚಿಸಿದೆ. ಜೊತೆಗೆ ಪ್ರತಿದಿನವೂ ದತ್ತಪೀಠದಲ್ಲಿ ಪೂಜೆ ನಡೆಯುತ್ತಿದೆ.

ದತ್ತಪೀಠ ಸಂಪೂರ್ಣವಾಗಿ ಹಿಂದೂಗಳ ಪೀಠವಾಗಬೇಕು ಎಂದು ಭಜರಂಗದಳ, ವಿಶ್ವಹಿಂದು ಪರಿಷತ್ ಒಟ್ಟಾಗಿ ದತ್ತಮಾಲಾ ಅಭಿಯಾನ ನಡೆಸಿದರೆ, ಶ್ರೀರಾಮ ಸೇನೆಯಿಂದಲೂ ದತ್ತಮಾಲಾ ಅಭಿಯಾನವನ್ನು ಪ್ರತಿವರ್ಷ ನಡೆಸಲಾಗುತ್ತಿದೆ. ಇದಲ್ಲದೆ ಹಿಂದುಪರ ಸಂಘಟನೆಗಳು ದತ್ತಪೀಠ ಹಿಂದುಗಳ ಪೀಠವಾಗಬೇಕು ಎಂಬ ಕಾರಣಕ್ಕೆ ಕಾನೂನು ಹೋರಾಟವನ್ನೂ ಆರಂಭಿಸಿದ್ದಾರೆ. ಇದರ ಮಧ್ಯೆ ಇದೀಗ ಹೊಸದೊಂದು ವಿವಾದ ಹುಟ್ಟಿಕೊಂಡAತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net