ದತ್ತಮಾಲಾ ಅಭಿಯಾನದ ಅಂಗವಾಗಿ ನ. ೭ರಂದು ದೀಪೋತ್ಸವ

25 ckm 1 gangadhar kulakarni
ಗಂಗಾಧರ ಕುಲಕರ್ಣಿ
Published on

ಚಿಕ್ಕಮಗಳೂರು: ಶ್ರೀರಾಮ ಸೇನೆಯ ನೇತೃತ್ವದಲ್ಲಿ ನ. ೪ರಿಂದ ೧೦ರವರೆಗೆ ನಡೆಯಲಿರುವ ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ನ. ೭ರಂದು ರಾಜ್ಯಾದ್ಯಂತ ದತ್ತ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದತ್ತಪೀಠದ ಮುಕ್ತಿಗಾಗಿ ನಡೆಯುತ್ತಿರುವ ಹೋರಾಟ ರಾಜ್ಯ ವ್ಯಾಪ್ತಿಯಲ್ಲಿ ವಿಸ್ತರಿಸಲು ಸಂಘಟನೆಯ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ತಾವು ಕೂಡ ಈಗಾಗಲೇ ೧೩ ಜಿಲ್ಲೆಗಳಲ್ಲಿ ಪ್ರವಾಸ ಮಾಡಿರುವುದಾಗಿ ಮಾಹಿತಿ ನೀಡಿದರು.

ನ. ೪ರಂದು ದತ್ತಮಾಲಾಧಾರಣೆ, ನ. ೭ರಂದು ದತ್ತ ದೀಪೋತ್ಸವ, ನ. ೯ರಂದು ಪಡಿ ಸಂಗ್ರಹ, ನ. ೧೦ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾ ಯಾತ್ರೆ ನಡೆಸಿ ನಂತರದಲ್ಲಿ ದತ್ತಪೀಠಕ್ಕೆ ತೆರಳಿ ಅಲ್ಲಿನ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲ ಭಕ್ತರು ಪಾಲ್ಗೊಳ್ಳಲಿದ್ದಾರೆ. ಸಂಘಟನೆ ಅಂದಾಜು ಮಾಡಿರುವ ಪ್ರಕಾರ ಸುಮಾರು ೫ ಸಾವಿರ ದತ್ತ ಭಕ್ತರು ಪೀಠಕ್ಕೆ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ಈ ಬಾರಿ ಚಿಕ್ಕಮಗಳೂರು ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ರಥಯಾತ್ರೆ ನಡೆಸಲು ಉz್ದೆÃಶಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ದತ್ತಪೀಠದಲ್ಲಿ ಕೊನೆಯ ದಿನ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ ತೆಲಂಗಾಣದ ಮಾಧವಿ ಲತಾ, ಮಾಜಿ ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ದತ್ತಪೀಠದ ಆವರಣದಲ್ಲಿರುವ ಗೋರಿಗಳನ್ನು ನಾಗೇನಹಳ್ಳಿಯಲ್ಲಿರುವ ದರ್ಗಾದ ಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು. ದತ್ತಪೀಠದಲ್ಲಿ ಇಸ್ಲಾಂ ಆಚರಣೆಗೆ ಅವಕಾಶ ನೀಡಬಾರದು. ದತ್ತ ಮಾಲೆ ಧರಿಸಿ ಪೀಠಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತದಿಂದ ಪ್ರಸಾದದ ವ್ಯವಸ್ಥೆ ಆಗಬೇಕು. ಹಿಂದೂ ಸಂಪ್ರದಾಯದ ಪ್ರಕಾರ ಪ್ರತಿನಿತ್ಯ ಪೂಜೆಗೆ ಅವಕಾಶ ನೀಡಬೇಕು ಎಂದರು.

ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕೆಲವು ನಿಬಂಧನೆಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ದತ್ತಪೀಠಕ್ಕೆ ಬರುವವರು ಮದ್ಯಪಾನ ಮಾಡಿ ಬರಬಾರದು ಎಂದು ಉಲ್ಲೇಖಿಸಲಾಗಿದೆ. ಮಾಲೆ ಧರಿಸಿದವರು ಯಾರೂ ಕೂಡ ಮದ್ಯಪಾನ ಮಾಡಿರುವುದಿಲ್ಲ. ಯಾತ್ರೆಯ ಸಂದರ್ಭದಲ್ಲಿ ಘೋಷಣೆ ಹಾಕಬಾರದು ಎಂದು ಹೇಳಿದ್ದಾರೆ. ನಾವು ಮಾಡುತ್ತಾ ಇರುವುದು ಶೋಭಾಯಾತ್ರೆಯೇ ಹೊರತು ಶವಯಾತ್ರೆಯಲ್ಲ. ಭಜನೆ, ಧ್ಯಾನ ಮಾಡಬಾರದೆಂದು ಹೇಳಿರುವುದರಲ್ಲಿ ಅರ್ಥವಿಲ್ಲ. ಈ ರೀತಿಯ ಹೊಸ ನಿಬಂಧನೆಗಳು ಸರಿಯಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆ ವಿಭಾಗೀಯ ಅಧ್ಯಕ್ಷ ರಂಜಿತ್ ಶೆಟ್ಟಿ, ದತ್ತಾತ್ರೇಯ ಧರ್ಮ ಚಿಂತಕ ರಾಜೇಂದ್ರಕುಮಾರ್, ಜಿಲ್ಲಾಧ್ಯಕ್ಷ ಅರ್ಜುನ್, ದುರ್ಗಾ ಸೇನೆ ಜಿಲ್ಲಾಧ್ಯಕ್ಷೆ ನವೀನ ರಂಜಿತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net