

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಸೆ. 24ರಂದು ಸಂಜೆ 5.30ಕ್ಕೆ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪ್ರೊ. ಸದಾನಂದ ಕನವಳ್ಳಿ ಸ್ಮರಣಾರ್ಥ ದತ್ತಿ ಉದ್ಘಾಟನೆ ಹಾಗೂ ಸದಾನಂದ ಕನವಳ್ಳಿ ಅವರ ಸಂಗೀತ ಸಂಬಂಧಗಳು ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.
ಉದ್ಘಾಟಕರಾಗಿ ಕವಿವ ಸಂಘದ ಗೌರವ ಉಪಾಧ್ಯಕ್ಷ ಪಂ. ಎಂ. ವೆಂಕಟೇಶಕುಮಾರ ಆಗಮಿಸುವರು. ಹಿರಿಯ ಸಾಹಿತಿ ಶಿರೀಷ ಜೋಶಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಹಿರಿಯ ಸಾಹಿತಿ ಡಾ. ಬಸವರಾಜ ಜಗಜಂಪಿ ಅಧ್ಯಕ್ಷತೆ ವಹಿಸುವರು. ರಾಯಚೂರಿನ ಸರಿತಾ ಮಹೇಶ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.