

ಚಿತ್ರದುರ್ಗ: ದತ್ತು ಶಾಲೆಗಳಿಗೆ ನಿಯಮಿತ ಭೇಟಿ ನೀಡಿ ಪರಿಶೀಲಿಸಬೇಕೆಂದು ಡಿಡಿಪಿಐ ಎಂ.ಆರ್.ಮಂಜುನಾಥ್ ಅನುಪಾಲನಾಧಿಕಾರಿಗಳಿಗೆ ತಾಕೀತು ಮಾಡಿದರು.
ಡಯಟ್‌ನಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳಿಗೆ ಹಂಚಿಕೆ ಮಾಡಿರುವ ದತ್ತು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಜತೆ ಸಂವಹನ ನಡೆಸಬೇಕು ಎಂದು ಹೇಳಿದರು.
ಮಕ್ಕಳಲ್ಲಿ ಓದುವ, ಬರೆಯುವ ಸಾಮರ್ಥ್ಯ ಬೆಳೆಸಲು ನಿತ್ಯ 2 ಪುಟ ಪಠ್ಯವಿಷಯ ಬರೆಸುವ ಮೂಲಕ ಸಾಮರ್ಥ್ಯ ಹೆಚ್ಚಿಸುವಂತೆ ಶಿಕ್ಷಕರಿಗೆ ಸೂಚಿಸಬೇಕು. ವಿದ್ಯಾರ್ಥಿಗಳು ತರಗತಿಗೆ ಗೈರು ಹಾಜರಾಗದಂತೆ ಕ್ರಮ ವಹಿಸಬೇಕೆಂದರು.
ಡಯಟ್ ಪ್ರಾಚಾರ‌್ಯ ಎಂ.ನಾಸಿರುದ್ದೀನ್ ಮಾತನಾಡಿ,ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರು ಮಕ್ಕಳ ಕಲಿಕಾ ಸಾಮರ್ಥ್ಯದ ಆಧಾರದ ಮೇಲೆ ಎಬಿಸಿ ಗುಂಪುಗಳನ್ನು ರಚಿಸಿಕೊಳ್ಳಬೇಕು. ವಿಶೇಷ ತರಗತಿ, ಗುಂಪು ಅಧ್ಯಯನ, ಸಹಪಾಠಿ ಜತೆ ಕಲಿಕೆ, ಪಾಸಿಂಗ್‌ಪ್ಯಾಕೇಜ್ ಕಾರ‌್ಯಕ್ರಮಗಳನ್ನು ನಿರ್ವಹಿಸುವ ಮೂಲಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮ ಪಡಿಸಬೇಕೆಂದರು.
ಸಿಟಿಇ ಪ್ರವಾಚಕ ಗುರುಪ್ರಸಾದ್, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ವೆಂಕಟೇಶಪ್ಪ, ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾ ರಿಗಳಾದ ಶ್ರೀನಿವಾಸ್, ಸೈಯದ್ ೋಸಿನ್, ಸುರೇಶ್, ನಾಗಭೂಷಣ್, ನಿರ್ಮಲಾದೇವಿ, ಡಯಟ್ ಹಿರಿಯ ಉಪನ್ಯಾಸಕರಾದ ಜ್ಞಾನೇಶ್ವರ, ತಿಪ್ಪೇಸ್ವಾಮಿ, ಗಿರಿಜಾ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು ಮತ್ತಿತರರಿದ್ದರು.
----