ಆಲೂರು: ದನದ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಆಲೂರು ಪೊಲೀಸರು ಬಂಧಿಸಿದ್ದಾರೆ.
ಹಾಸನ ನಗರದ ತಣ್ಣೀರು ಹಳ್ಳದ ನಿವಾಸಿಗಳಾದ ಅಬ್ದುಲ್ ರಹೀಂ, ಪತ್ನಿ ಶಾಹಿನ ಬಂಧಿತರು. ತಾಲೂಕಿನ ಮಗ್ಗೆ ಗ್ರಾಮದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆಗೆ ಹಾಸನದಿಂದ ಆಟೋದಲ್ಲಿ ದನದ ಮಾಂಸವನ್ನು ಕತ್ತರಿಸಿ ಪ್ಯಾಕ್ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಆಲೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮೋಹನ್ ರೆಡ್ಡಿ, ಸಬ್ ಇನ್‌ಸ್ಪೆಕ್ಟರ್ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿ ಪೂರ್ಣೇಂದ್ರ, ಪುನೀತ್, ಮನು ಕುಮಾರ್ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ 30 ಕೆ.ಜಿ. ದನದ ಮಾಂಸ ಹಾಗೂ ಆಟೋ ವಶಪಡಿಸಿಕೊಂಡಿದ್ದಾರೆ. ಆಲೂರು ಠಾಣೆಯಲ್ಲಿ ದೂರು ದಾಖಲಾಗಿದೆ.