ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ

IMG_20231212_135141--02
Published on

ಚಿತ್ರದುರ್ಗ:ಸೇವೆ ಕಾಯಂಗೆ ಒತ್ತಾಯಿಸಿ ನಗರದ ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ರಾಜ್ಯಸರ್ಕಾರಿ ಪ್ರಥಮ ದರ್ಜೆ ಕಾಲೇಜುಗ ಳ ಅತಿಥಿ ಉಪನ್ಯಾಸಕರು ಮಂಗಳವಾರ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದು, ದಯಾ ಮರಣಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರಬರೆ ದಿದ್ದಾರೆ.
ಕಳೆದ ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ನಮ್ಮಗಳ ಸೇವೆ ಕಾಯಂಗೊಳಿಸುವಂತೆ ಸರ್ಕಾರಕ್ಕೆ ನಿದೇ ಶರ್ನ ನೀಡಿ ಅಥವಾ ನಮಗೆ ದಯಾಮರಣಕ್ಕೆ ಅನುಮತಿ ಕೊಡುವಂತೆ ಕೋರಿ 150ಕ್ಕೂ ಹೆಚ್ಚು ಉಪನ್ಯಾಸಕರು ರಾಜ್ಯಪಾಲರಿಗೆ ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ. ಸೇವೆ ಕಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ 20 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net