

ಹಿರಿಯೂರು: ತಾಲೂಕಿನ ಅಡವಿ ರಾಮಜೋಗಿಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಅಳವಡಿಸಲು ಈಚೆಗೆ ಅಡ್ಡಿಪಡಿಸಿದ್ದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಾಲೂಕು ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ರಚಿಸಿದ ಸಂವಿಧಾನ ಎಲ್ಲ ಜಾತಿ-ಧರ್ಮದವರಿಗೆ ಅನುಕೂಲ ಕಲ್ಪಿಸಿದೆ. ಆದರೆ, ಅಂಬೇಡ್ಕರ್ ನಾಮಫಲಕ ಅಳವಡಿಸಲು ಮುಂದಾದ ಸಂದರ್ಭ ದೌರ್ಜನ್ಯ, ಹಲ್ಲೆ ನಡೆಸಲಾಗಿದೆ. ಕೂಡಲೇ ಅವರುಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪದಾಧಿಕಾರಿಗಳಾದ ತಿಮ್ಮರಾಜ್, ಜೀವೇಶ್, ರಘುನಾಥ್ ಇದ್ದರು.