

ಕಂಪ್ಲಿ: ಪಟ್ಟಣದಿಂದ ಬಳ್ಳಾರಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ದರೋಜಿ ರೈಲ್ವೆ ಗೇಟ್‌ಗೆ ಮೇಲ್ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಬೆಂಗಳೂರಿನಲ್ಲಿ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ದರೋಜಿ ಬಳಿ ರೈಲ್ವೆ ಗೇಟ್ ಹಾಕಿದಾಗ ಜನರು 30ರಿಂದ 45 ನಿಮಿಷ ಕಾಯಬೇಕಾಗುತ್ತದೆ. ಇದರಿಂದಾಗಿ ಆಂಬ್ಯುಲೆನ್ಸ್‌ನಲ್ಲಿ ತೆರಳುವ ರೋಗಿಗಳು, ಬಸ್ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ತಿಳಿಸಿದರು. ತಾಲೂಕು ಕಾರ್ಯಾಧ್ಯಕ್ಷ ಕೊಟ್ಟೂರು ರಮೇಶ, ನಗರ ಘಟಕದ ಕೋಶಾಧ್ಯಕ್ಷ ಟಿ.ಗಂಗಣ್ಣ ಇದ್ದರು.