

ದಾವಣಗೆರೆ: ಕುಂದುವಾಡ ರಸ್ತೆಯ ಬಾಲಾಜಿ ಲೇಔಟ್‌ನ ಮನೆಯೊಂದರಲ್ಲಿ ಬುಧವಾರ ಹಾಡಹಗಲೇ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಅಪರಿಚಿತರ ಬಗ್ಗೆ ನಿಗಾ ವಹಿಸಿ: ಎಸ್ಪಿ
ಮನೆಗಳಲ್ಲಿ ಒಂಟಿ ಮಹಿಳೆಯರಿದ್ದಲ್ಲಿ ಅಪರಿಚಿತರ ಬಗ್ಗೆ ಎಚ್ಚರ ವಹಿಸಬೇಕು. ಮಾತನಾಡುವ ಸೋಗಿನಲ್ಲಿ ಬಂದು ಮನೆಯೊಳಗೆ ನುಗ್ಗುವ, ಸರಗಳ್ಳತನ ಅಥವಾ ಹಣ ದೋಚುವ ಸಾಧ್ಯತೆ ಇದೆ ಎಚ್ಚರ ವಹಿಸಿ ಎಂದು ಎಸ್ಪಿ ಉಮಾ ಪ್ರಶಾಂತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ಅರಿವು ಮೂಡಿಸಲಿದೆ. ಬೀಗ ಹಾಕಿದ ಮನೆಗಳಲ್ಲಿ ಹೆಚ್ಚು ಕಳ್ಳತನ ನಡೆಯುತ್ತಿದ್ದು, ಮನೆ ಮಾಲೀಕರು ಮನೆಯಿಂದ ತೆರಳುವಾಗ ಪೊಲೀಸರಿಗೆ ಮಾಹಿತಿ ನೀಡಿದರೆ ಬೀಟ್ ವ್ಯವಸ್ಥೆ ಮೂಲಕ ನಿಗಾ ವಹಿಸಲು ಅನುಕೂಲವಾಗಲಿದೆ ಎಂದಿದ್ದಾರೆ.