ದರೋಡೆಗೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ದರೋಡೆಗೆ ಯತ್ನಿಸುತ್ತಿದ್ದ ಇಬ್ಬರ ಬಂಧನ
Published on

ಹಾಸನ: ರಸ್ತೆಯಲ್ಲಿ ಓಡಾಡುವ ಜನರನ್ನು ತಡೆದು ಬೆಲೆ ಬಾಳುವ ಚಿನ್ನಾಭರಣ, ಹಣ ಹಾಗೂ ಮೊಬೈಲ್‌ಗಳನ್ನು ಕಿತ್ತುಕೊಳ್ಳಲು ಸಂಚು ರೂಪಿಸುತ್ತಿದ್ದ ಇಬ್ಬರು ರೌಡಿಶೀಟರ್‌ಗಳನ್ನು ನಗರ ಪೊಲೀಸ್ ಠಾಣೆ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ.
ವಿಜಯನಗರ ಬಡಾವಣೆಯ ಅಶೋಕ್ ಕುಮಾರ್ (42) ಹಾಗೂ ಕಸಬಾ ಹೋಬಳಿಯ ಸಮುದ್ರವಳ್ಳಿಯ ರಾಕೇಶ್‌ಗೌಡ (27) ಬಂಧಿತ ಆರೋಪಿಗಳು
ಗುರುವಾರ ನಗರದಲ್ಲಿ ರಸ್ತೆಯಲ್ಲಿ ಓಡಾಡುವ ಜನರನ್ನು ತಡೆದು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ವೇಳೆ ಹಾಸನ ನಗರ ಪೊಲೀಸ್ ಠಾಣೆ ಪಿಎಸ್‌ಐ ಕುಮಾರ್ ಹಾಗೂ ಠಾಣೆಯ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net