ದರ್ಶನ ಸಹಚರ ಬಳ್ಳಾರಿ ಜೈಲಿಗೆ ಶಿಫ್ಟ್ ಸಾಧ್ಯತೆ

Published on

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾರಾಗೃಹದಲ್ಲಿರುವ ನಟ ದರ್ಶನ್ ಸಹಚರರೊಬ್ಬರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿ ನಟ ದರ್ಶನ್‌ಗೆ ವಿಶೇಷ ಅತಿಥ್ಯ ನೀಡಿದ್ದ ಪೋಟೋ ಸಾಮಾಜಿ ಜಾಲ ತಾಣದಲ್ಲಿ ವೈರಲ್‌ಯಾಗಿತ್ತು. ಬಳಿಕ ಸರ್ಕಾರ ವಿಶೇಷ ಅತಿಥ್ಯ ಪಡೆದ ದರ್ಶನ್ ಹಾಗೂ ಇತರರನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಿದೆ. ಹಿನ್ನಲೆ, ಪರಪ್ಪನ ಜೈಲು ಸಿಬ್ಬಂದಿ ಇಲ್ಲಿನ ಪೊಲೀಸ್ ಸಿಬ್ಬಂದಿಗೆ ಕರೆ ಮಾಡಿ ಜೈಲಿನ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ 385 ಕೈದಿಗಳಿದ್ದು, 485 ಕೈದಿಗಳನ್ನು ಇರಿಸುವ ಸಾಮರ್ಥ್ಯ ಹೊಂದಿದೆ. ಜೈಲಿನಲ್ಲಿ ನಟ ದರ್ಶನ್ ಇಡುವಂತ ವ್ಯವಸ್ಥೆಯಿಲ್ಲ. ಆದರೆ, ಅವರ ಸಹಚರೊಬ್ಬನನ್ನು ಸ್ಥಳಾಂತರ ಮಾಡುವ ಸಾಧ್ಯತೆಯಿದೆ ಎಂದು ಅಪ್ತ ಮೂಲಗಳು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net