ಬಳ್ಳಾರಿ : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಆರೋಪಿ ನಟ ದರ್ಶನ್‌ಗೆ ವೈದ್ಯರ ವರದಿಯ ಶಿಫಾರಸ್ಸಿನಂತೆ ಮೆಡಿಕಲ್ ಬೆಡ್, ದಿಂಬು ಹಾಗೂ ಕೂರಲು ಕುರ್ಚಿಯನ್ನು ಬುಧವಾರ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದರು.
ದರ್ಶನ್ ಕಳೆದ ಕೆಲ ತಿಂಗಳ ಹಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಇತ್ತೀಚೆಗೆ ಬಿಮ್ಸ್ ನ್ಯೂರ‌್ಯೋ ಸರ್ಜನ್ ಡಾ. ವಿಶ್ವನಾಥ ಅವರು ದರ್ಶನ್ ಆರೋಗ್ಯ ತಪಾಸಣೆ ನಡೆಸಿ ಮಂಗಳವಾರ ವರದಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಕೆ ಮಾಡಿದ್ದರು. ವೈದ್ಯರ ವರದಿ ಆಧಾರದಂತೆ ಜೈಲಿನ ಅಧಿಕಾರಿಗಳು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ಅನುಮತಿ ಪಡೆದಿದ್ದಾರೆ. ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ಬೆಡ್, ದಿಂಬು ಹಾಗೂ ಕುರ್ಚಿಯನ್ನು ತರಿಸಿ ದರ್ಶನ್ ಇರುವ ಹೈ ಸೆಕ್ಯೂರಿಟಿ ಸೆಲ್‌ಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿದವು.