ದಲಿತ ಕೇರಿಗಳಲ್ಲಿ ಮೂಲ ಸೌಕರ್ಯ

24kuddlligi1
Published on

ಕೂಡ್ಲಿಗಿ: ಕ್ಷೇತ್ರದ ದಮನಿತ ವರ್ಗದ ಎಲ್ಲ ಕಾಲನಿಗಳನ್ನು ಅಭಿವೃದ್ಧಿಪಡಿಸಲು ಹಲವು ಯೋಜನೆಗಳನ್ನು ರೂಪಿಸಿ ಚಾಲನೆ ನೀಡಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದ ಅಂಬೇಡ್ಕರ್ ಕಾಲನಿಯಲ್ಲಿ ಕೆಕೆಆರ್‌ಡಿಬಿಯ ಅಂದಾಜು ಮೂರು ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ಕ್ಷೇತ್ರದ ಎಲ್ಲ ದಲಿತ ಕೇರಿಗಳಿಗೆ ಭೇಟಿ ನೀಡಿ ಅಲ್ಲಿನ ದಯನೀಯ ಪರಿಸ್ಥಿತಿ ಅರಿತು ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಇತರ ಮೂಲ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಪಡಿಸಿರುವೆ ಎಂದರು.

ಪಟ್ಟಣದ ಅಂಬೇಡ್ಕರ್ ಕಾಲನಿಯಲ್ಲಿ ಸಿಸಿ ರಸ್ತೆ ಹಾಕಿ ಅವಶ್ಯವಿರುವ ಕಡೆ ಕಾಲುವೆ ನಿರ್ಮಾಣ ಮಾಡಲು ಸೂಚನೆ ನೀಡಿರುವೆ. ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟಕ್ಕೆ ಆದ್ಯತೆ ನೀಡಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿರುವೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net