ದಲಿತ ಸಂಘರ್ಷ ಸಮಿತಿ ಪ್ರತಿಭಟನೆ 27ಕ್ಕೆ

24HDK005
Published on

ಎಚ್.ಡಿ.ಕೋಟೆ: ತಾಲೂಕಿನ ಶಿರಮಳ್ಳಿ ಸರ್ಕಾರಿ ಶಾಲೆಯಲ್ಲಿ ಗ್ರಾಮದ ಕೆಲವು ವ್ಯಕ್ತಿಗಳು ಶಿಕ್ಷಕರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ನೀಡದೆ, ಅವರಿಗೆ ಜಾತಿನಿಂದನೆ ಮಾಡಿದ್ದಾರೆ. ಈ ಬಗ್ಗೆ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಪೊಲೀಸ್ ಇಲಾಖೆಯ ಬೇಜವಾಬ್ದಾರಿ ಖಂಡಿಸಿ ಜ.27ರಂದು ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಒಕ್ಕೂಟಗಳ ವತಿಯಿಂದ ಅಂತರಸಂತೆ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ತಿಳಿಸಿದರು.

ತಾಲೂಕಿನ ಅಂತರಸಂತೆ ಗ್ರಾಮದಲ್ಲಿರುವ ಸಾರನಾಥ ಬುದ್ಧವಿಹಾರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿರಮಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೆಲವರು ಸರ್ಕಾರಿ ಶಾಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಸಹಿಸಲಾಗದೆ ಅವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ, ಶಾಲೆಯಲ್ಲಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಅವರ ಜಾತಿನಿಂದನೆ ಮಾಡಿದ್ದಾರೆ. ಈ ಬಗ್ಗೆ ಜ.8 ರಂದು ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಮತ್ತು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೂರು ದಾಖಲಿಸಲಾಗಿತ್ತು. ಆದರೆ ಈವರೆಗೂ ಪೊಲೀಸರು ಕ್ರಮವಹಿಸಿಲ್ಲ. ಪೊಲೀಸ್ ಇಲಾಖೆಯ ಈ ಬೇಜಾವಾಬ್ದಾರಿಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಇದೇ ವೇಳೆ ಪ್ರಗತಿಪರ ಒಕ್ಕೂಟದ ಹೋಬಳಿ ಅಧ್ಯಕ್ಷ ಮಂಜು ಹೊಸಮಾಳ, ಅಕ್ರಮ ಸಕ್ರಮ ಸಮಿತಿ ಸದಸ್ಯ ಬಾಲಯ್ಯ, ಕರ್ನಾಟಕ ಭೀಮ್ ಸೇನೆ ತಾಲೂಕು ಅಧ್ಯಕ್ಷ ಪ್ರಕಾಶ್ ಬುದ್ಧ, ಮುಖಂಡರಾಜು ಚಾ.ನಂಜುಂಡಮೂರ್ತಿ, ಚೌಡಳ್ಳಿ ಜವರಯ್ಯ, ಹೆಗ್ಗನೂರು ನಿಂಗರಾಜು, ದಾಸಯ್ಯ ಹೊಳೆಹುಂಡಿ, ರಾಜಶೇಖರ ಶಿರಮಳ್ಳಿ, ಶೇಖರ್ ಜಿಯಾರಾ, ಆಲಯ್ಯ ಅಂತರಸಂತೆ, ಸೋಗಳ್ಳಿ ಶಿವಣ್ಣ, ಮಳಲಿ ನಾಗಯ್ಯ, ದೊಡ್ಡಸಿದ್ದು, ಅನಿಲ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net