ದಲಿತರ ಕಾಲನಿ ಸಮಸ್ಯೆ ಇತ್ಯರ್ಥ

8,KHH-1P
Published on

ಕಾನಹೊಸಹಳ್ಳಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿರುವುದರಿಂದ ಚರಂಡಿ ಮತ್ತು ಮಳೆ ನೀರು ಸಂಗ್ರಹವಾಗಿ ದಲಿತರ ಕಾಲನಿ ಕಲುಷಿತವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ಗ್ರಾಮದ ದಲಿತರ ಕಾಲನಿಯಲ್ಲಿ ಸಮಸ್ಯೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದು ಸೋಮವಾರ ಮಾತನಾಡಿದರು. ಸರ್ವಿಸ್ ರಸ್ತೆ ಕಾಮಗಾರಿ ಮಾಡುವಾಗ ಒಳ ಚರಂಡಿಯನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕಿತ್ತು. ಬೇಕಾಬಿಟ್ಟಿ ಕಾಮಗಾರಿ ಮಾಡಿರುವುದರಿಂದ ಈ ಸಮಸ್ಯೆಯಾಗಿದೆ ಎಂದರು.

ಗ್ರಾಪಂ ಸದಸ್ಯ ಹೊನ್ನೂರಸ್ವಾಮಿ ಮಾತನಾಡಿ, ಕಳೆದ ಐದಾರು ವರ್ಷಗಳಿಂದ ಚರಂಡಿ ಸಮಸ್ಯೆಯಿದ್ದು, ಈ ಕುರಿತು ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಮನವಿ ಸಲ್ಲಿಸಿದರೂ ಕ್ರಮಕೈಗೊಂಡಿವೆಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷ ಕೆ.ಜಿ.ಸಿದ್ದನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ರಜನೀಕಾಂತ್, ಜುಟ್ಟಲಿಂಗನಹಟ್ಟಿ ಬೊಮ್ಮಣ್ಣ, ಜಿ.ಓಬಣ್ಣ, ತಾಪಂ ಇಒ ನರಸಪ್ಪ, ಪಿಡಿಒ ವಿನಯಕುಮಾರ್, ಸೂರ್ಯಪ್ರಕಾಶ್, ಮಂಜುನಾಥ, ಗ್ರಾಪಂ ಮಾಜಿ ಉಪಾಧ್ಯಕ್ಷ ಬೋರಣ್ಣ, ಡಾ.ಓಂಕಾರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net