

ಹಾಸನ: ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಲಿತರ ಸಮಸ್ಯೆಯನ್ನ ಕೇಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಲಿತ ಮುಖಂಡ ಎಚ್.ಕೆ. ಸಂದೇಶ್ ಆರೋಪಿಸಿದರು.
ಇತ್ತೀಚಿಗೆ ತಾಲೂಕಿನ ಮಡೆನೂರು ಗ್ರಾಮದಲ್ಲಿ ದಲಿತರು ದೇವಸ್ಥಾನ ಪ್ರವೇಶ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳು ಸ್ಥಳಕ್ಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.ದೇವಾಲಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಏನು ಆದರೂ ಅವಘಡ ಸಂಭವಿಸಿದ್ದರೆ ಯಾರು ಹೊಣೆಗಾರರಾಗುತ್ತಿದ್ದರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು
ಜಿಲ್ಲಾಡಳಿತ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳು ಹೆಚ್ಚಾಗುತ್ತಿದ್ದರು ಕೂಡ ಕಣ್ಮುಚ್ಚಿ ಕುಳಿತಿದೆ. ಮಡೆನೂರು ಪ್ರಕರಣ ಹಾಗೂ ಆಲೂರು ತಾಲೂಕಿನ ಹಂತನಮನೆ ಗ್ರಾಮದಲ್ಲಿ ದಲಿತರಿಗೆ ಬಟ್ಟೆ ಹೊಗೆಯಲು ಅವಕಾಶ ನೀಡದೇ ಇರುವುದು ಹಾಗೂ ಚನ್ನರಾಯಪಟ್ಟಣದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಕ್ಕೆ ಸೇರಿದವರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು ಇವರು ದಲಿತರಿಗೆ ಧ್ವನಿ ಆಗುತ್ತದೆ ಎಂಬ ನಂಬಿಕೆ ಇತ್ತು ಆದರೆ ನಂಬಿಕೆ ಹುಸಿಯಾಗಿದೆ. ಇವರಿಗೆ ಜಿಲ್ಲೆಯಲ್ಲಿ ಕೆಲಸ ಮಾಡಲು ಸಾಧ್ಯವಾಗದಿದ್ದರೆ ಬೇರೆ ಕಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಲಿ ನಾವೇ ಅವರಿಗೆ ಬಿಳ್ಕೊಡುತ್ತೇವೆ ಎಂದು ಹೇಳಿದರು.
ಇದೇ ರೀತಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಜೊತೆಗೆ ಮುಖ್ಯಮಂತ್ರಿಗಳ ಗಮನಕ್ಕೂ ಕೂಡ ತರಲಾಗುವುದೆಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ವಿಜಯ್ ಕುಮಾರ್, ಶಿವಮ್ಮ, ಅಂಬುಗ ಮಲ್ಲೇಶ್, ಹೆತ್ತೂರು ನಾಗರಾಜ, ಆರ್‌ಪಿಐ ಸತೀಶ್, ಪ್ರಸನ್ನ ಹಾಜರಿದ್ದರು