ದಲಿತರನ್ನು ವಿಭಜಿಸುವ ಷಡ್ಯಂತ್ರ

22LNG01
Published on

ಲಿಂಗಸುಗೂರು: ಸಿಎಂ ಸಿದ್ದರಾಮಯ್ಯ ಅ.24 ರಂದು ಒಳ ಮೀಸಲಾತಿ ಜಾರಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಹೇಳಿರುವುದು ಸರಿಯಲ್ಲ. ಒಳ ಮೀಸಲಾತಿ ಜಾರಿಯಿಂದ ಪರಿಶಿಷ್ಟ ಜಾತಿ 99 ಸಮುದಾಯಗಳಿಗೆ ಅನ್ಯಾಯವಾಗಲಿದೆ ಎಂದು ಎಸಿ ಬಸವಣೆಪ್ಪ ಕಲಶೆಟ್ಟಿಗೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘದಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.

ಒಳ ಮೀಸಲಾತಿ ದಲಿತರನ್ನು ವಿಭಜಿಸುವ ರಾಜಕೀಯ ಷಡ್ಯಂತ್ರವಾಗಿದೆ. ಒಳ ಮೀಸಲಾತಿ ಜಾರಿಯಿಂದ 101 ಸಮುದಾಯಗಳ ಪೈಕಿ 99 ದಲಿತ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಪರಿಶಿಷ್ಟ ಜಾತಿ ಎಲ್ಲ ಸಮುದಾಯಗಳ ಜನಸಂಖ್ಯೆವಾರು ಜನಗಣತಿಯಾಗಬೇಕು ಎಂದು ಆಗ್ರಹಿಸಲಾಯಿತು.

ಪರಿಶಿಷ್ಟ ಜಾತಿಯಲ್ಲಿನ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಆಧಾರದ ಮೇಲೆ ನಿರ್ಣಯ ಕೈಗೊಳ್ಳಬೇಕು. ಪರಿಶಿಷ್ಟ ಜಾತಿಯ ಒಂದೆರಡು ಸಮುದಾಯಗಳ ಓಲೈಕೆ ಮಾಡದೆ ಜಾತಿ, ಮತ, ಪಕ್ಷಭೇದವಿಲ್ಲದೆ ಎಲ್ಲ ಸಮುದಾಯಗಳಿಗೂ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net