ದಲಿತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್​ರಾಜ್​ ಸೂಚನೆ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

1
Published on

ಕೋಲಾರ

ದಲಿತರ ಮೇಲಿನ ದೌರ್ಜನ್ಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನೊಂದವರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್​ರಾಜಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು, ಯಾವುದೇ ಪ್ರಕರಣಗಳ ಮಾಹಿತಿ ಹಾಗೂ ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ತಕ್ಷಣವೇ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

2022ರಲ್ಲಿ 27 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನೊಂದವರಿಗೆ ಶ್ರೀದಲ್ಲಿ ಪರಿಹಾರ ಒದಗಿಸಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ವಕೀಲರ ನೆರವು: ಕಾನೂನು ಸಲಹೆಗಾಗಿ ಸಂತ್ರಸ್ತರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ವಕೀಲರ ನೆರವು ಪಡೆಯಬಹುದು. ಪ್ರಕರಣಗಳಲ್ಲಿ ಮರಣೋತ್ತರ ಪರೀೆ, ಆರೋಪಪಟ್ಟಿ ಕುರಿತ ಮಾಹಿತಿಗಳನ್ನು ಪರಿಶೀಲಿಸಿ ನಂತರ ಪರಿಹಾರ ನೀಡಲಾಗುವುದು. ಸಂತ್ರಸ್ತರ ಕುಟುಂಬಗಳ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಎಲ್ಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ವೆಂಕಟ್​ರಾಜಾ ಹೇಳಿದರು.

64 ಪ್ರಕರಣಗಳಲ್ಲಿ ಪರಿಹಾರ: 2020&21ರಲ್ಲಿ 64 ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಗಳಿಗೆ ಪರಿಹಾರ ಒದಗಿಸಲಾಗಿದೆ. ಸಂತ್ರಸ್ತರಿಗೆ ಪುನರ್ವಸತಿ ಸೌಲಭ್ಯ ಒದಗಿಸಲಾಗುವುದು. ಗ್ರಾಪಂಗಳ ವ್ಯಾಪ್ತಿಯಲ್ಲಿ ನರೇಗಾ ಮತ್ತು ಕುಡಿಯುವ ನೀರು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ರ್ನಿಬಂಧ ಪ್ರಕರಣ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಹೇಳಿದರು.

ಎಸ್​ಸಿ, ಎಸ್​ಟಿ ಭೂ ಅತಿಕ್ರಮಣದ ವಿರುದ್ಧ ಕ್ರಮ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ ಹಂಚಿಕೆ ಮಾಡಿರುವ ಜಮೀನನ್ನು ಅಕ್ರಮವಾಗಿ ಅತಿಕ್ರಮಣ ಮಾಡುವುದು, ಸಾಗುವಳಿ ಮಾಡಿದ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸರ್ಕಾರದ ಯೋಜನೆಗಳಿಂದ ಯಾರೊಬ್ಬರೂ ವಂಚಿತರಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಿ.ದೇವರಾಜ್​ ಮಾತನಾಡಿ, 2021ರಲ್ಲಿ 54 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಪ್ರಕರಣ ನಡೆದ 24 ಗಂಟೆಯೊಳಗೆ ಎಫ್​ಐಆರ್​ ದಾಖಲಾಗಬೇಕು. ತನಿಖೆ ಮಾಡಿ ಸಂಪೂರ್ಣ ಮಾಹಿತಿ ಒದಗಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯವರು ನೀಡಿರುವ ಪರಿಹಾರದ ಪೂರ್ಣ ಮಾಹಿತಿಯನ್ನು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳ ಕಚೇರಿಗೆ ಒದಗಿಸಬೇಕು. ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಿ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ಯಾವುದೇ ಪ್ರಕರಣಗಳಲ್ಲಿ ಪರಿಹಾರದ ಜತೆಗೆ ನ್ಯಾಯ ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಪ್ರಕರಣಗಳಲ್ಲಿ ಸುಳ್ಳು ಆರೋಪಗಳ ಕುರಿತು ಪರಿಶೀಲಿಸಿ ನಿರಪರಾಧಿಗಳಿಗೆ ಅನ್ಯಾಯವಾಗದಂತೆ ಗಮನಹರಿಸಬೇಕು ಎಂದು ತಾಕೀತು ಮಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್​ಕುಮಾರ್​ ಮಾತನಾಡಿ, ದಲಿತ ದೌರ್ಜನ್ಯ ಪ್ರಕರಣಗಳು ನಡೆದಲ್ಲಿ ಶ್ರೀವಾಗಿ ಗಮನಕ್ಕೆ ತರಬೇಕು. ಆ ಪ್ರಕರಣಗಳನ್ನು ಪರಿಶೀಲಿಸಿ ನ್ಯಾಯ ಒದಗಿಸಲು ಶ್ರಮಿಸಲಾಗುವುದು. ಪ್ರಕರಣಗಳ ತನಿಖೆಯಲ್ಲಿ ನ್ಯೂನತೆ ಕಂಡುಬಂದರೂ ಆ ಬಗ್ಗೆಯೂ ಮಾಹಿತಿ ನೀಡುವಂತೆ ಹೇಳಿದರು.

ಕೆಜಿಎಫ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಧರಣೀದೇವಿ, ಅಪರ ಜಿಲ್ಲಾಧಿಕಾರಿ ಡಾ.ಸ್ನೇಹಾ, ಕೋಲಾರ ಉಪ ವಿಭಾಗಾಧಿಕಾರಿ ಆನಂದ್​ ಪ್ರಕಾಶ್​ಮೀನಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಮುನಿರಾಜು, ವೆಂಕಟರಾಮ್​, ಬೆಳಮಾರನಹಳ್ಳಿ ಆನಂದ್​ ಮತ್ತಿತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net