ದಲಿತರಿಗೆ ಸಿಎಂ ಸ್ಥಾನ ನೀಡಲು ಆಗ್ರಹ

VBD
Published on

ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಹಾಗೂ ಮುಸ್ಲಿಮ್​ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಶ್ವ ಬಹುಜನ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಟ್ರಸ್ಟ್ ರಾಜ್ಯಾಧ್ಯಕ್ಷ ಪರಮೇಶಪ್ಪ ಹಲಗೇರಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾತಿವಾರು ಜನಗಣತಿ ಮಾಡಬೇಕು. ಆಯಾ ಸಮುದಾಯಗಳ ಜನಸಂಖ್ಯೆಗೆ ತಕ್ಕಂತೆ ಅವರವರ ಹಕ್ಕು-ಅಧಿಕಾರಗಳು ಹಂಚಿಕೆಯಾಗಬೇಕು. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೂತನ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ವ್ಯಾಪಾರೀಕರಣವನ್ನು ನಿಯಂತ್ರಿಸಬೇಕು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಭಾರತ ದೇಶಕ್ಕೆ ಹಿಂದುಸ್ಥಾನ ಎನ್ನುವುದು ಹಾಗೂ ಮಠ-ದೇವಸ್ಥಾನಗಳಿಗೆ ಅನುದಾನ ನೀಡುವುದನ್ನು ರದ್ದುಪಡಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸದಾನಂದ ತೇರದಾಳ, ರಾಜ್ಯ ಉಪಾಧ್ಯಕ್ಷ ಶಿವಾನಂದ ಜಿ.ಜಿ., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net