ದಲಿತರಿಗೆ ಹೆಚ್ಚಿನ ಅವಕಾಶ ನೀಡಲು ಕಾಂಗ್ರೆಸ್ ಎಸ್ಸಿ ವಿಭಾಗ ಒತ್ತಾಯ

Published on

ಮೈಸೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವನ್ನು ದಲಿತರು ಬೆಂಬಲಿಸಿರುವುದರಿಂದ ಸಮುದಾಯಕ್ಕೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಗರ ಪರಿಶಿಷ್ಟ ಜಾತಿ ವಿಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದೆ.
ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಪರಿಶಿಷ್ಟ ವರ್ಗದ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು,- ನಿಗಮ ಮಂಡಳಿಗಳಿಗೆ ಪರಿಶಿಷ್ಟ ವಿಭಾಗದಿಂದ ನಿರ್ದೇಶಕರನ್ನು ಆಯ್ಕೆ ಮಾಡಬೇಕು. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸದಸ್ಯತ್ವಕ್ಕೆ ಪರಿಶಿಷ್ಟ ಜಾತಿ ವಿಭಾಗದಿಂದ ಕಾರ್ಯಕರ್ತರನ್ನು ನೇಮಿಸಬೇಕು. ದೇವರಾಜ ಠಾಣೆ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿ ಚುರುಕುಗೊಳಿಸಬೇಕು ಎಂದು ವಿಭಾಗದ ಉಪಾಧ್ಯಕ್ಷ ಎಚ್.ಎಂ.ಅಂಕಯ್ಯ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಪದಾಧಿಕಾರಿಗಳಾದ ಬಿ.ರಾಜಶೇಖರ್, ರವಿ, ಸಿದ್ದರಾಜು, ಮಹಾದೇವು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net