ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ

19sri-3 web
Published on

ಶೃಂಗೇರಿ: ಮಳೆಯಿಂದಾಗಿ ನಾಲ್ಕು ದಿನಗಳ ಹಿಂದೆ ನೆರಳಕೂಡಿಗೆ ಬಳಿ ಕುಸಿತಗೊಂಡಿದ್ದ ಶೃಂಗೇರಿ-ಆಗುಂಬೆ ರಾಜ್ಯ ಹೆದ್ದಾರಿಯಲ್ಲಿ ಸೋಮವಾರದಿಂದ ದ್ವಿಚಕ್ರ ವಾಹನ, ಪಾದಚಾರಿಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು, ಗ್ರಾಮಸ್ಥರು ಕೆಲಸ ಕಾರ್ಯಗಳಿಗೆ ತೆರಳಲು ತೊಂದರೆಯಾಗುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಸೋಮವಾರ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪಕ್ಕದಲ್ಲಿನ ಮತ್ತೊಂದು ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಪಾದಚಾರಿಗಳ ಓಡಾಟಕ್ಕೆ ಅನುವು ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net