ದಶಕಗಳ ಬೇಡಿಕೆ ಈಡೇರಿಕೆ

Vijaykumar Dumme
Published on

ಬೀದರ್: ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣವನ್ನು ಶೇ. 15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 3ರಿಂದ 7ಕ್ಕೆ ಹೆಚ್ಚಿಸಲು ಸರ್ಕಾರದ ತೀರ್ಮಾನಕ್ಕೆ ಆದಿವಾಸಿ ಸಾಹಿತ್ಯ ಪರಿಷತ್ ಸ್ವಾಗತಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು  ಈ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕೆಂಬ ಬೇಡಿಕೆ ದಶಕಗಳಿಂದ ಇತ್ತು. ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಈಡೇರಿಸಿದ್ದು ಖುಷಿ ತಂದಿದೆ. ಮೀಸಲಾತಿ ಹೆಚ್ಚಿಸಿದ ತೀರ್ಮಾನವನ್ನು ಜಾರಿಗೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆದಿವಾಸಿ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಡುಮ್ಮೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net