ದಸರಾಕ್ಕೆ 2 ಕೋಟಿ ರೂ. ಬಿಡುಗಡೆಗೆ ಆಗ್ರಹ

dasara-1
Published on


ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ ಒತ್ತಾಯಿಸಿದ್ದಾರೆ.


ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೊರೆ ನಡುವೆ ಹಬ್ಬ ಆಚರಿಸಬೇಕಾದ ದುಸ್ಥಿತಿ ಬಂದೊದಗಿದ್ದು, ಪ್ರಸ್ತುತ ಬಿಡುಗಡೆ ಮಾಡಿರುವ 1 ಕೋಟಿ ರೂ. ಅತ್ಯಂತ ಅಲ್ಪವಾಗಿದೆ. ಪ್ರವಾಸೋದ್ಯಮ ಮೂಲಕ ಗಮನ ಸೆಳೆದು ಅನೇಕರಿಗೆ ಉದ್ಯೋಗ ಕಲ್ಪಿಸಿಕೊಟ್ಟಿರುವ ಮಡಿಕೇರಿ ನಗರಕ್ಕೆ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಲು ಮತ್ತು ಐತಿಹಾಸಿಕ ದಸರಾ ಮಹೋತ್ಸವ ಅದ್ದೂರಿಯಾಗಿ ಆಚರಿಸಲು ಹೆಚ್ಚಿನ ಅನುದಾನದ ಅಗತ್ಯವಿದೆ. ಆರ್ಥಿಕ ಹೊಡೆತದಿಂದ ಜನರು ಕಷ್ಟದಲ್ಲಿರುವುದರಿಂದ ದಸರಾ ಸಮಿತಿಗಳು ಸಾರ್ವಜನಿಕವಾಗಿ ಹಣ ಸಂಗ್ರಹಿಸಿ ಹಬ್ಬ ಆಚರಿಸಲು ಅಸಾಧ್ಯವಾಗಿದ್ದು, ಸರ್ಕಾರವೇ ಹಣ ನೀಡಬೇಕೆಂದು ಪ್ರಕಟಣೆಯಲ್ಲಿ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net