

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಗೋದೂತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಗುರುವಾರ ಸಂಜೆ ಆಯೋಜಿಸಿದ್ದ ದಾಂಡಿಯಾ ನೈಟ್ಸ್ನಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕ ವೃಂದ ಕುಣಿದು ಕುಪ್ಪಳಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ, ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ, ಕೋಮಲಾ ಅಪ್ಪ, ಶಿವಾನಿ ಎಸ್ ಅಪ್ಪ ಮತ್ತು ಮಹೇಶ್ವರಿ ಅಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲರ ಪತ್ನಿ, ಪ್ರೇಮಲತಾ ಪಾಟೀಲ್, ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ ಇದ್ದರು.
ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಮೂರು ಸುಪುತ್ರಿಯರು ತಮ್ಮ ವಿಶಿಷ್ಠ ವೇಷಭೂಷಣದಲ್ಲಿ ಕಾಣಿಸಿಕೊಂಡು ಚಿರಂಜೀವಿ ದೊಡ್ಡಪ್ಪ ಅಪ್ಪ ಜತೆಯಾಗಿ ದಾಂಡಿಯಾ ಕುಣಿತಕ್ಕೆ ಹೆಜ್ಜೆಹಾಕಿ ಚಪ್ಪಾಳೆ ಗಿಟ್ಟಿಸಿಕೊಂಡರು. ವೀಕ್ಷಿಸಿದ ಡಾ.ಅವ್ವಾಜಿ ಸಂತಸಪಟ್ಟರು.
ಈ ದಾಂಡಿಯಾ ನೈಟ್ಸ್ನಲ್ಲಿ ವಿವಿಧ ಕಡೆ ಕಣ್ಮನ ಸೆಳೆಯುವ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿತ್ತು. ಜೋರಾದ ಧ್ವನಿ ವರ್ಧಕ ಅಳವಡಿಸಲಾಗಿತ್ತು. ದಾಂಡಿಯಾ ಸಂಗೀತಕ್ಕೆ ಹೆಜ್ಜೆ ಹಾಕುತ್ತಾ ವಿದ್ಯಾರ್ಥಿ, ಪ್ರಾಧ್ಯಾಪಕರು ಕುಣಿದು ಕುಪ್ಪಳಿಸಿದರು.
ಶರಣಬಸವ ವಿದ್ಯಾವರ್ಧಕ ಸಂಘದಡಿ ಬರುವ ವಿವಿಧ ಶಿಕ್ಷಣ ಸಂಸ್ಥೆ ಹಾಗೂ ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.