

ಬಾಗಲಕೋಟೆ: ಲೋಕಸಭಾ ಚುನಾವಣೆ ಚುನಾವಣೆ ಹಿನ್ನಲೆಯಲ್ಲಿ ಹುನಗುಂದ ಮತಕ್ಷೇತ್ರ ವ್ಯಾಪ್ತಿಯ ನಾಯನೇಗಲಿ ಚೆಕ್‌ಪೋಸ್ಟನಲ್ಲಿ ಸೋಮವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ೬ ಲಕ್ಷ ರೂ.ಗಳನ್ನು ಎಸ್‌ಎಸ್‌ಟಿ ಮತ್ತು ಎಫ್‌ಎಸ್‌ಟಿ ತಂಡ ವಶಕ್ಕೆ ಪಡೆದುಕೊಂಡಿದೆ.
ಹೊಸೂರ ಚೆಕ್‌ಪೋಸ್ಟನಲ್ಲಿಯೂ ಸಹ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದ ೧,೦೬೨೦೦ ಮತ್ತು ೧,೨೫,೦೦೦ ರೂ.ಗಳ ಹಣವನ್ನು ಜಪ್ತ ಮಾಡಲಾಗಿದೆ ಎಂದು ಬಾಗಲಕೋಟೆ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.