ದಾಖಲೆ ನೀಡಿ ಸವಲತ್ತು ಪಡೆಯಿರಿ

Untitled design (5)
ಸಿರವಾರ ಪಟ್ಟಣದ ಚುಕ್ಕಿ ರುದ್ರಮ್ಮ ಉಮಾಪತಿ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಲಾಯಿತು. ತಹಸೀಲ್ದಾರ್ ರವಿ ಅಂಗಡಿ, ಸಿಪಿಐ ಶಶಿಕಾಂತ್ ಎಂ., ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಖಜಾನೆ ಇಲಾಖೆ ಜಂಬೂನಾಥ, ಸಿಡಿಪಿಒ ನಾಗರತ್ನಾ ಇತರರಿದ್ದರು.
Published on

ಸಿರವಾರ: ಪಟ್ಟಣದ ಚುಕ್ಕಿ ರುದ್ರಮ್ಮ ಉಮಾಪತಿ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ತಹಸೀಲ್ದಾರ್ ರವಿ ಅಂಗಡಿ ಬುಧವಾರ ಚಾಲನೆ ನೀಡಿದರು.


ನಂತರ ಮಾತನಾಡಿ, ರಾಜ್ಯ ಸರ್ಕಾರ ಗೃಹಲಕ್ಷ್ಮೀ, ಗೃಹ ಜ್ಯೋತಿ ಸೇರಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರ ತಿಳಿಸಿದಂತೆ ಅಗತ್ಯ ದಾಖಲೆಗಳನ್ನು ನೀಡಿ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.


ಮುಖ್ಯಮಂತ್ರಿಗಳು ಉದ್ಘಾಟಿಸುವ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮವನ್ನು ನೇರ ಪ್ರಸಾರವನ್ನು ಜೂಮ್ ಆ್ಯಪ್ ಮೂಲಕ ತೋರಿಸಬೇಕಿತ್ತು. ಆದರೆ, ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಮಾಹಿತಿ ಕೊರತೆಯಿಂದ ಯೂಟ್ಯೂಬ್ ಮೂಲಕ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವುದನ್ನು ವೇದಿಕೆಯಲ್ಲಿ ತೋರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net