ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ: ಎಚ್‌ಡಿಕೆಗೆ ಸಚಿವ ಕೆ.ವೆಂಕಟೇಶ್ ಸವಾಲು

k-venkatesh-1-1685157441
Published on

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅವರು ಸುಖಾಸುಮ್ಮನೆ ಆರೋಪ ಮಾಡುವುದಲ್ಲ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಸವಾಲು ಹಾಕಿದರು.


ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಹೊಟ್ಟೆ ಉರಿ ತಡೆದುಕೊಳ್ಳಲು ಆಗುತ್ತಿಲ್ಲ. ಸಮ್ಮಿಶ್ರ ಸರ್ಕಾರ ಬರುತ್ತೆ, ಮತ್ತೆ ಸಿಎಂ ಆಗ್ತೀನಿ ಎಂದು ಕನಸು ಕಾಣುತ್ತಿದ್ದರು.

ಕಿಂಗ್ ಮೇಕರ್ ಆಗ್ತೀನಿ, ಸಿಎಂ ಆಗ್ತೀನಿ ಅಂದ್ಕೊಂಡಿದ್ದರು. ಆದರೆ, ಅವರ ಆಸೆ ಈಡೇರಲಿಲ್ಲ. ಹೀಗಾಗಿ, ಹತಾಶರಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net