ದಾಳಿ ಹಿಂದೆ ಬಿಜೆಪಿ ಪಾತ್ರವಿಲ್ಲ

Basavaraja Bommai
ಸಾಂದರ್ಭಿಕ ಚಿತ್ರ
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಮಾಜಿ ಸಚಿವ ಆರ್. ಶಂಕರ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ್ದರ ದಾಳಿ ಹಿಂದೆ ಬಿಜೆಪಿ ಪಾತ್ರವಿಲ್ಲ. ಬಿಜೆಪಿ ಪ್ರೇರಿತ ದಾಳಿ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳಿಗೆ ಎಷ್ಟು ಮುಕ್ತ ವಾತಾವರಣ ನೀಡಿದ್ದೇವೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಯಾರೇ ತಪ್ಪು ಮಾಡಿದರೂ ಅವರನ್ನು ಶಿಕ್ಷಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಶಂಕರ ಪ್ರಕರಣದಲ್ಲಿಯೂ ತನಿಖಾ ಸಂಸ್ಥೆಗಳು ತಮ್ಮದೇ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿ.ವೈ. ವಿಜಯೇಂದ್ರ ಮಾತಿನ ಚಕಮಕಿ ವಿಚಾರಕ್ಕೆ ಪ್ರಶ್ನೆ ಕೇಳಿದ ಮಾಧ್ಯಮದವರ ವಿರುದ್ಧ ಸಿಎಂ ಸಿಡಿಮಿಡಿಗೊಂಡು, ಎಲ್ಲವೂ ಮಾಧ್ಯಮಗಳ ಸೃಷ್ಟಿ ಎಂದರು. ಸಚಿವ ವಿ. ಸೋಮಣ್ಣ ದೆಹಲಿಗೆ ಹೋಗುತ್ತಿರುವ ವಿಚಾರ ನನಗೆ ಗೊತ್ತಿದೆ ಎಂದು ಸಿಟ್ಟಿನಿಂದಲೇ ತಮ್ಮ ಸ್ವಗ್ರಹದಿಂದ ಸಿಎಂ ಬೊಮ್ಮಾಯಿ ಹೊರನಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net