ದಾವಣಗೆರೆ, ಆಸ್ಪತ್ರೆಗೆ, ಜಿಲ್ಲಾಧಿಕಾರಿ, ಭೇಟಿ,

IMG-20230527-WA0039.jpg
Published on

ದಾವಣಗೆರೆ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ಟ್ರಾಮಾ ಕೇರ್ ಸೆಂಟರ್ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಚಿಗಟೇರಿ ಸಾರ್ವಜನಿಕ ಆಸ್ಪತ್ರೆ ಅಧೀಕ್ಷಕರಿಗೆ ಸೂಚಿಸಿದರು.

ಶನಿವಾರ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟ್ರಾಮಾ ಕೇರ್ ಸೆಂಟರ್ ಕಾಮಗಾರಿ ಪರಿಶೀಲಿಸಿದ ಡಿಸಿ, ಇಲ್ಲಿ ತುರ್ತು ಚಿಕಿತ್ಸಾ ಸಂದರ್ಭದಲ್ಲಿ ಅಗತ್ಯವಾಗಿ ಬೇಕಾಗುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವಂತೆಯೂ ತಿಳಿಸಿದರು.

100 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿದ್ದು ಹೆಚ್ಚುವರಿಯಾಗಿ ಇನ್ನು 100 ಹಾಸಿಗೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಅದನ್ನೂ ಗುಣಮಟ್ಟ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಹೇಳಿದರು.

ಚಿಗಟೇರಿ ಆಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ರೋಗಿಗಳೊಂದಿಗೆ ಸಮಲೋಚಿಸಿದ ಡಿಸಿ, ಇಲ್ಲಿ ಸಿಗುತ್ತಿರುವ ಚಿಕಿತ್ಸಾ ಸೌಲಭ್ಯಗಳ ಮಾಹಿತಿ ಪಡೆದರು. ಜಿಲ್ಲಾ ಸರ್ಜನ್ ಡಾ.ಸುಭಾಶ್ಚಂದ್ರ, ನಿವಾಸಿ ವೈದ್ಯಾಧಿಕಾರಿ ಪಾಟೀಲ್ ಇತರ ಅಧಿಕಾರಿಗಳಿದ್ದರು.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net