ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಉಮಾ ಅವರು ಚಿಕ್ಕಮಗಳೂರು ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇವರು ಈ ಹಿಂದೆ ಮಂಗಳೂರು ಉಪ ಪೊಲೀಸ್ ಆಯುಕ್ತೆ, ಭ್ರಷ್ಟಾಚಾರ ನಿಗ್ರಹದಳದಲ್ಲಿ ಕಾರ್ಯ ನಿರ್ವಹಿಸಿದ್ದರು. ಕುಣಿಗಲ್, ಕಾರವಾರ, ಮಂಗಳೂರು ಎಸ್ಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
---