ಮಾಯಕೊಂಡದಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ

DVG-KSB-30.jpg
Published on

ದಾವಣಗೆರೆ : ರಾಜ್ಯ ಸರ್ಕಾರ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿರುವುದು ಬಡವರ ಆರ್ಥಿಕಾಭಿವೃದ್ಧಿಗೆ ಉತ್ತಮ ಮಾರ್ಗವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
 ತಾಲೂಕಿನ ಮಾಯಕೊಂಡದ ಸಮುದಾಯ ಭವನದಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಮಹಿಳೆಯರಿಗೆ ಅದೃಷ್ಟದ ದಿನವಾಗಿದೆ ಎಂದರು.
 ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿರುವ ಎಲ್ಲಾ ಮಹಿಳೆಯರಿಗೆ 2 ಸಾವಿರ ರೂ. ಅವರ ಖಾತೆಗೆ ಜಮಾ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಜಿಪಂ ಇಒ ರಾಮಭೋವಿ, ಉಪತಹಸೀಲ್ದಾರ್ ಹಾಲೇಶಪ್ಪ, ಸಿಡಿಪಿಒ ಶಶಿಕುಮಾರ್, ಗ್ರಾಪಂ ಅಧ್ಯಕ್ಷೆ ಶಿವಮ್ಮ ಮಲ್ಲಿಕಪ್ಪ, ಪಿಡಿಒ ನಾಗರಾಜ್, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ಹನುಮಂತಪ್ಪ,  ಗೋಪಾಲ್, ರುದ್ರೇಶ್, ಗ್ರಾಪಂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net