

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ 70 ನೇ ಜನ್ಮದಿನದ ಅಂಗವಾಗಿ ಗುರುವಾರ, ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಮಹಾನಗರ ಪಾಲಿಕೆ ಸದಸ್ಯ ಶಿವನಗೌಡ ಟಿ. ಪಾಟೀಲ್ ಸೇರಿದಂತೆ ಅನೇಕ ಕಾರ್ಯಕರ್ತರು ರಕ್ತದಾನ ಮಾಡಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಪಾಲಿಕೆ ಸದಸ್ಯ ಶಿವಪ್ರಕಾಶ್, ಮುಖಂಡರಾದ ಗಿರೀಶ್, ಗೋಪಾಲ್ ರಾವ್ ಮಾನೆ, ಶ್ರೀಕಾಂತ ನೀಲಗುಂದ, ಗುರು, ಶಶಿಧರ್, ಯಲ್ಲೇಶ್, ಪ್ರಶಾಂತ್, ಬಾಪೂಜಿ ಬ್ಲಡ್ ಬ್ಯಾಂಕ್ ಹಾಗೂ ಲೈಫ್ ಲೈನ್ ಬ್ಲಡ್ ಬ್ಯಾಂಕಿನ ಮುಖ್ಯಸ್ಥರು ಇದ್ದರು.