

ದಾವಣಗೆರೆ: ಬೆಂಗಳೂರು ಸೇರಿ ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ಶೋ ಭವ್ಯವಾಗಿ ನಡೆದಿದೆ. ಜನರು ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿದ್ದಾರೆ. ಈ ಹುರುಪು ಮತಗಟ್ಟೆವರೆಗೂ ವ್ಯಾಪಿಸಲಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮನವಿ ಮಾಡಿದರು. ದಾವಣಗೆರೆ ಉತ್ತರ-ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಗರದಲ್ಲಿ ರೋಡ್ ಶೋ ನಡೆಸಿದ ಅವರು ವಿನೋಬನಗರದಲ್ಲಿ ಮತಯಾಚನೆ ಮಾಡಿ ಮಾತನಾಡಿದರು.