ದಾಸನದೊಡ್ಡಿ ಗ್ರಾಮಸ್ಥರ ಪ್ರತಿಭಟನೆ

15 HANUR 5
Published on

ಹನೂರು: ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನದೊಡ್ಡಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಪಡಿಸುವಂತೆ ಒತ್ತಾಯಿಸಿ ಮಂಗಳವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮದ ಮುಖ್ಯ ರಸ್ತೆ ಬದಿಯಲ್ಲಿರುವ ಟ್ರಾನ್ಸ್‌ಫಾರ್ಮರ್ ಸ್ಥಳಕ್ಕೆ ಖಾಲಿ ಬಿಂದಿಗೆ ಹಿಡಿದು ಆಗಮಿಸಿದ ಮಹಿಳೆಯರು ಸೆಸ್ಕ್ ಇಲಾಖೆ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಗ್ರಾಮಸ್ಥರು ಮಾತನಾಡಿ, ಗ್ರಾಮದಲ್ಲಿ ಸುಮಾರು 80 ಕುಟುಂಬಗಳಿದ್ದು, ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಗ್ರಾಮದಲ್ಲಿನ ಟ್ರಾನ್ಸ್‌ಫಾರ್ಮರ್ ಕೆಟ್ಟು 4 ದಿನಗಳಾಗಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ದುರಸ್ತಿ ಮಾಡುವಂತೆ ಸೆಸ್ಕ್‌ಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಗೆ ಮುಂದಾಗದಿದ್ದರೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ದಾಸಶೆಟ್ಟಿ, ಜಡೇಸ್ವಾಮಿ, ಸೋಮ, ನಂಜಪ್ಪ, ಮಾದೇವ, ಮಂಗಳಮ್ಮ, ಮಂಜುಳಾ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net