ದಾಸೋಹ ತತ್ವ ಎತ್ತಿ ಹಿಡಿದ ಮಹಾನ್ ವ್ಯಕ್ತಿ

2708Klb11
Published on

ಕಲಬುರಗಿ: ಪೂಜ್ಯ ದೊಡ್ಡಪ್ಪ ಅಪ್ಪ ಅವರು ಶರಣಬಸವೇಶ್ವರ ಸಂಸ್ಥಾನದ ಕಾಯಕ ದಾಸೋಹ ತತ್ವ ಎತ್ತಿ ಹಿಡಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ಶರಣಬಸವ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ.ಸಾರಿಕಾದೇವಿ ಕಾಳಗಿ ಅಭಿಪ್ರಾಯ ಪಟ್ಟರು.
ಶರಣಬಸವ ವಿಶ್ವವಿದ್ಯಾಲಯದ ಅನುಭವ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಪೂಜ್ಯ ದೊಡ್ಡಪ್ಪ ಅಪ್ಪ ಪುಣ್ಯಸ್ಮರಣೋತ್ಸವ ದಲ್ಲಿ ಮಾತನಾಡಿದ ಅವರು, ದೊಡ್ಡಪ್ಪ ಅಪ್ಪ ಸಾಮಾಜಿಕ, ಶೈಕ್ಷಣಿಕವಾಗಿ ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನಾಂದಿ ಹಾಡಿದ್ದಾರೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್. ಪಾಟೀಲ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್, ಡಾ.ನಾನಾಸಾಹೇಬ್, ಡಾ.ಚಿದಾನಂದ ಚಿಕ್ಕಮಠ, ಪ್ರೊ.ನಿರ್ಮಲಾ ದೊರೆ, ಡಾ.ಎಲೆನೋರ ಗೀತಮಾಲಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net