ಚಾಮರಾಜನಗರ: ನಗರದ ಎರಡು ಶೆಡ್‌ಗಳಲ್ಲಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಪಟ್ಟಣ ಠಾಣೆ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪದ ಶೆಡ್‌ಗಳಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಶೇಖರಣೆ ಮಾಡಿಟ್ಟುಕೊಂಡಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ 2487.950 ಕೆ.ಜಿ ಪಡಿತರ ಅಕ್ಕಿ ಸಿಕ್ಕಿದೆ. ಶೆಡ್‌ಗಳ ಮಾಲೀಕರಾದ ಅಬ್ದುಲ್ ಮತ್ತು ಶಾಹಜಹಾನ್ ಪರಾರಿಯಾಗಿದ್ದಾರೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.