ದಾಹ ನೀಗಿಸಲು ಅರವಟಿಗೆ ಸಹಕಾರಿ

13 SIRUGUPPA 01
Published on

ಸಿರಗುಪ್ಪ: ತಾಲೂಕಿನಲ್ಲಿ ದಿನೇ ದಿನೆ ಬಿಸಿಲಿನ ತಾಪ ಹೆಚ್ಚುತ್ತಿದೆ. ಮಧ್ಯಾಹ್ನ ಬಿಸಿಲಲ್ಲಿ ನಾಲ್ಕೈದು ಹೆಜ್ಜೆ ನಡೆಯುವಷ್ಟರಲ್ಲಿ ಜನರು ಬಸವಳಿಯುತ್ತಿದ್ದಾರೆ. ನೀರನ ಅರವಟಿಕೆ ದಾಹವನ್ನು ನಿಗಿಸಲು ನೆರವಾಗುತ್ತದೆ ಎಂದು ಬಸವ ಮಠದ ಬಸವಭೂಷಣ ಸ್ವಾಮೀಜಿ ಹೇಳಿದರು.

ನಗರಸಭೆ ಕಾರ್ಯಾಲಯದ ಮುಂಭಾಗ ವಿಷ್ಣು ವಿಲಾಸ್ ಸೌಹಾರ್ದ ಪತ್ತಿನ ಸಹಕಾರಿ ಸಂಘದಿಂದ ಆರಂಭಿಸಿದ ಶುದ್ಧ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿ ಮಾತನಾಡಿದರು. ವಿಷ್ಣು ವಿಲಾಸ್ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್.ಜೆ ಹನುಮಂತಯ್ಯ ಮಾತನಾಡಿ, ನಮ್ಮ ಸಹಕಾರಿಯಿಂದ ಬೇಸಿಗೆ ಸಮಯದಲ್ಲಿ ನಿರಂತರವಾಗಿ ನೀರಿನ ದಾಹ ನೀಗಿಸುವ ಸಲುವಾಗಿ ಸೇವೆ ಆರಂಭಿಸಿದ್ದು, ಇದರಿಂದ ಜನಸಾಮಾನ್ಯರಿಗೆ ತುಂಬ ಉಪಯುಕ್ತವಾಗಲಿದೆ ಎಂದರು.

ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ್ ನಾಯಕ, ನಗರಸಭೆ ಮಾಜಿ ಅಧ್ಯಕ್ಷ ವೆಂಕಟರಾಮ ರೆಡ್ಡಿ, ನಗರಸಭೆ ಆರೋಗ್ಯ ನಿರೀಕ್ಷಕ ರಂಗಸ್ವಾಮಿ, ನಿರ್ದೇಶಕರಾದ ಜೆ.ಶ್ರೀರಾಮ, ಎಂ.ಕೆ.ಬದ್ರಿನಾಥ್, ಆರ್.ನಾಗರಾಜ ಶೆಟ್ಟಿ, ಮುಖ್ಯ ಕಾರ್ಯನಿರ್ವಾಹಕ ಅನಿಲ್ ಕುಮಾರ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net